Samayanews.

Samayanews.

2024-12-24 01:08:38

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಿಯಂತ್ರಣ ತಪ್ಪಿ ಚರಂಡಿಗುರುಳಿದ ಬಸ್, 17 ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಶಿವಮೊಗ್ಗ ಕಡೆಯಿಂದ ಬೈಂದೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್​​ವೊಂದು ಚಾಲಕನ ನಿಯಂತ್ರಣ ತಪ್ಪಿ, ಚರಂಡಿಗಿಳಿದ ಘಟನೆ ಕೊಲ್ಲೂರು ಸಮೀಪದ ದಳಿಮುರ್ಕು ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಬಸ್​​ನಲ್ಲಿದ್ದ ಕೊಲ್ಲೂರು ಮೂಕಾಂಬಿಕಾ ಹೈಸ್ಕೂಲ್​ನ 6 ವಿದ್ಯಾರ್ಥಿಗಳು ಹಾಗೂ 11 ಪಿಯುಸಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದೆ.

ಗಾಯಗೊಂಡವರನ್ನು ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಐವರು ವಿದ್ಯಾರ್ಥಿಗಳಿಗೆ ಮೂಳೆ ಮುರಿತವಾಗಿರುವುದು ತಿಳಿದು ಬಂದಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಎಸ್​​ಪಿ ಎಸ್.ಟಿ.ಸಿದ್ದಲಿಂಗಪ್ಪ, ಕೊಲ್ಲೂರು ಠಾಣೆ ಪಿಎಸ್‌ಐಗಳಾದ ವಿನಯ್ ಎಂ. ಕೊರ್ಲಹಳ್ಳಿ, ಸುಧಾರಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ. ಅಪಘಾತದಿಂದ ಮಕ್ಕಳು ಕಂಗಾಲಾಗಿದ್ದು, ಬೈಂದೂರು ಬಿಇಒ ನಾಗೇಶ್ ನಾಯಕ್ ಹಾಗೂ ಹೆಚ್ಚುವರಿ ಎಸ್​​ಪಿ ಶಾಲೆಗೆ ಭೇಟಿ ನೀಡಿ ಧೈರ್ಯ ತುಂಬಿದರು.

img
Author

Post a comment

No Reviews