ಬೆಂಗಳೂರು; ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ನಡೆ ವಿರೋಧಿಸಿ ಆಗಸ್ಟ್ 31 ರಂದು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಮುಂದಾಗಿದೆ.
ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಸ್ಟ್ 31 ರಂದು ರಾಜಭವನ ಚಲೋಗೆ ಕರೆ ನೀಡಿದ್ದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಸ್ಟ್ 31 ರಂದು ರಾಜಭವನ ಚಲೋಗೆ ಕರೆ ನೀಡಿದ್ದಾರೆ.
ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್'ಗೆ ಅನುಮತಿ ನೀಡಿರುವ ರಾಜ್ಯಪಾಲರು ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧವೂ ಕಾನೂನು ಕ್ರಮ ಜರುಗಿಸುವಂತೆ ಅನುಮತಿ ನೀಡಬೇಕು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಮತ್ತು ಜನಾರ್ದನರೆಡ್ಡಿ ಅವರನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಲು ಲೋಕಾಯುಕ್ತರು ರಾಜ್ಯಪಾಲರ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ. ಒಂದು ದಶಕದಿಂದ ಪ್ರಕರಣದ ತನಿಖೆ ನಡೆಯುತ್ತಿದ್ದರೂ ರಾಜ್ಯಪಾಲರು ಅನುಮತಿ ನೀಡಿಲ್ಲ. ಹೀಗಾಗಿ, ಆಗಸ್ಟ್ 31 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ರಾಜಭವನ ಚಲೋ ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಬಳಿ ಇರುವ ಗಾಂಧಿ ಪ್ರತಿಮೆಯಿಂದ ಆರಂಭಗೊಂಡು ರಾಜಭವನಕ್ಕೆ ತಲುಪಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಸಚಿವರು, ಪಕ್ಷದ ಶಾಸಕರು, ಎಂಎಲ್ಸಿಗಳು ಮತ್ತು ಸಂಸದರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದು ಬಳಿಕ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ ಎಂದರು.
Post a comment
Log in to write reviews