ಟಾಪ್ 10 ನ್ಯೂಸ್
ಅಲ್ಪಸಂಖ್ಯಾತ ನಿರ್ದೇಶನಾಲಯದಲ್ಲಿ ಕೋಚಿಂಗ್ ಪಡೆದ 16 ಮಂದಿಗೆ ಸರ್ಕಾರಿ ಹುದ್ದೆ
ಬೆಂಗಳೂರು : ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಐಎಎಸ್ ಮತ್ತು ಕೆಐಎಸ್ ತರಬೇತಿ ನೀಡಲಾಗಿದ್ದು, ಅದರಲ್ಲಿ ತರಬೇತಿ ಪಡೆದ 16 ಮಂದಿ ಪೊಲೀಸ್ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಹುದ್ದೆ ಪಡೆದಿದ್ದಾರೆ.
ಈ ಕುರಿತು ಮಾತನಾಡಿದ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅಭ್ಯರ್ಥಿಗಳ ಉಜ್ವಲ ಭವಿಷ್ಯಕ್ಕೆ ಈ ತರಬೇತಿ ಕೇಂದ್ರ ಆರಂಭಿಸಿದ್ದು, ಇಲ್ಲಿ ಕೋರ್ಸ್ ಪಡೆದ 16 ಮಂದಿಗೆ ಸರ್ಕಾರಿ ಉದ್ಯೋಗ ದೊರೆತಿದೆ. ಇದೊಂದು ಒಳ್ಳೆಯ ಬೆಳವಣಿಗೆ. ಕನಿಷ್ಠ 50 ಮಂದಿ ಐಎಎಸ್ ಪಾಸ್ ಮಾಡುವ ಮಟ್ಟಕ್ಕೆ ಗುಣಮಟ್ಟದ ತರಬೇತಿ ನೀಡುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದರು. ಅಲ್ಪಸಂಖ್ಯಾತರ ನಿರ್ದೇನಾಲಯ ವ್ಯಾಪ್ತಿಯ ವಸತಿ ಕಾಲೇಜು, ಎಪಿಜೆ ಕಲಾಂ ವಸತಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿರುವ ಬಗ್ಗೆ ಸಚಿವರು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.
Post a comment
Log in to write reviews