ಕಲಬುರಗಿ : ಶಾಲೆಯ ಆಹಾರ ಸೇವಿಸಿ 17ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ಪಟ್ಟಣ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಅಸ್ವಸ್ಥ ವಿದ್ಯಾರ್ಥಿನಿಯರನ್ನು ಜೇವರ್ಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಫುಡ್ ಪಾಯಿಸನ್ನಿಂದಾಗಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಶಂಕೆ ವ್ಯಕ್ತವಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Post a comment
Log in to write reviews