ನವದೆಹಲಿ: ಭಾರತ ಸರ್ಕಾರದ ಸ್ಟಾಫ್ ಸೆಲೆಕ್ಷನ್ ಕಮಿಷನ್ (Staff Selection Commission) ಖಾಲಿ ಇರುವ ಸ್ಟೆನೋಗ್ರಾಫರ್ (Stenographer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಬರೋಬ್ಬರಿ 2,006 ಹುದ್ದೆ ಖಾಲಿ ಇದ್ದು, 12ನೇ ತರಗತಿ (ದ್ವಿತೀಯ ಪಿಯುಸಿ) ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 17 (Job Alert).
ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ
ಸ್ಟೆನೋಗ್ರಾಫರ್ ಗ್ರೇಡ್ ಸಿ ಮತ್ತು ಡಿ ಹುದ್ದೆ ಇದಾಗಿದ್ದು, ಆಯ್ಕೆಯಾದವರನ್ನು ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ಸಚಿವಾಲಯಗಳು, ಕಚೇರಿಗಳಿಗೆ ನೇಮಕ ಮಾಡಿಕೊಳ್ಳಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಸಿ ಸ್ಟೆನೋಗ್ರಾಫರ್ ಗ್ರೂಪ್ ಸಿ ಮತ್ತು ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರು.
ವಯೋಮಿತಿ
ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-30 ವರ್ಷದೊಳಗಿರಬೇಕು ಮತ್ತು ಸ್ಟೆನೋಗ್ರಾಫರ್ ಗ್ರೇಡ್ ಸಿ ಹುದ್ದೆಗೆ ಅರ್ಜಿ ಸಲ್ಲಿಸುವವರ ವಯಸ್ಸು 18-27 ವರ್ಷದೊಳಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.
ಅರ್ಜಿ ಶುಲ್ಕ
ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ಆನ್‌ಲೈನ್ ಮೂಲಕ 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ, ಮಹಿಳಾ, ಮಾಜಿ ಸೈನಿಕ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.
ಆಯ್ಕೆ ವಿಧಾನ ಮತ್ತು ಮಾಸಿಕ ವೇತನ
ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ ಜತೆಗೆ ಸ್ಟೆನೋಗ್ರಾಫಿ ಸ್ಕಿಲ್ ಟೆಸ್ಟ್ ಇರುತ್ತದೆ. ಈ ಎರಡು ಪರೀಕ್ಷೆಗಳಲ್ಲಿ ಅರ್ಹತೆ ಪಡೆದವರ ಮೂಲ ದಾಖಲೆಗಳ ಪರಿಶೀಲಿಸಲಾಗುತ್ತದೆ. ಕೊನೆಗೆ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದವರಿಗೆ 30,000 ರೂ. – 39, 995 ರೂ. ಮಾಸಿಕ ವೇತನ ದೊರೆಯಲಿದೆ.
ಅರ್ಜಿ ಸಲ್ಲಿಸುವ ವಿಧಾನ
- ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ https://ssc.gov.in/login
- ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
- ಪಾಸ್‌ವರ್ಡ್ ಬಳಸಿ ಲಾಗಿನ್ ಆಗಿ.
- ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್ ಫಾರಂ ಭರ್ತಿ ಮಾಡಿ.
- ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್ ಮಾಡಿ.
- ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
- ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್ ಕ್ಲಿಕ್ ಮಾಡಿ.
- ಅಪ್ಲಿಕೇಷನ್ ಫಾರಂ ಡೌನ್‌ಲೋಡ್ ಮಾಡಿ ಪ್ರಿಂಟ್‌ಔಟ್ ತೆಗೆದಿಡಿ.
Post a comment
Log in to write reviews