ಬೆಂಗಳೂರು: ಸಲಗ ಸಿನಿಮಾದ ನಂತರ ಸಿನಿಪ್ರೇಕ್ಷಕರ ಮುಂದೆ ಮತ್ತೆ ಬಂದಿದ್ದಾರೆ ದುನಿಯಾ ವಿಜಯ್. ಇವರೇ ನಟಿಸಿ ನಿರ್ದೇಶನ ಮಾಡಿರುವ ‘ಭೀಮ’ ಸಿನಿಮಾ ರಾಜ್ಯಾದ್ಯಂತ ಅದ್ಧೂರಿಯಾಗಿ ಆಗಸ್ಟ್ 9ರಂದು ರಿಲೀಸ್ ಆಗಿದೆ. ದುನಿಯಾ ವಿಜಯ್ ಅವರ ನಟನೆಯ ‘ಭೀಮ’ ಮೊದಲ ದಿನ 3.5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿತ್ತು. ಕಳೆದ 9 ದಿನಗಳಲ್ಲಿ ‘ಭೀಮ’ 19.73 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಹಾಗೇ 10ನೇ ದಿನ ಕಲೆಕ್ಷನ್ ಸೇರಿದರೆ, 21 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ.ಈ ಬಗ್ಗೆ ‘ಭೀಮ’ ತಂಡ ಅಧಿಕೃತವಾಗಿ ಇನ್ನೂ ಮಾಹಿತಿಯನ್ನು ಹಂಚಿಕೊಳ್ಳಬೇಕಿದೆ.
ದುನಿಯಾ ವಿಜಯ್ ನಿರ್ದೇಶಿಸಿದ ಎರಡನೇ ಸಿನಿಮಾ ಕೂಡ ಹಿಟ್ ಲಿಸ್ಟ್ ಸೇರಿದೆ. ಬೆಂಗಳೂರು ಸೇರಿದಂತೆ ಬಿ ಹಾಗೂ ಸಿ ಸೆಂಟರ್‌ಗಳಲ್ಲಿ ‘ಭೀಮ’ ಕಲೆಕ್ಷನ್ ಭರ್ಜರಿಯಾಗಿದೆ. 10ನೇ ದಿನ ಅಂದರೆ, ನಿನ್ನೆ (ಆಗಸ್ಟ್ 18) ಕೂಡ ಕಲೆಕ್ಷನ್ ಸಖತ್ ಆಗಿದೆ.
ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ನಿರ್ಮಾಣದ ‘ಭೀಮ’ ಚಿತ್ರದಲ್ಲಿ ಅನುಭವಿ ಕಲಾವಿದರ ಜೊತೆ ಹೊಸ ಪ್ರತಿಭೆಗಳಿಗೆ ಅವಕಾಶ ಸಿಕ್ಕಿದೆ. ಮಾಸ್ತಿ ಸಂಭಾಷಣೆ, ಚರಣ್ ರಾಜ್ ಸಂಗೀತ ಚಿತ್ರಕ್ಕೆ ಪ್ಲಸ್ ಆಗಿದೆ. ಒಂದಷ್ಟು ತಪ್ಪುಗಳ ನಡುವೆಯೂ ಮಾಸ್ ಪ್ರೇಕ್ಷಕರನ್ನು ಸಿನಿಮಾ ರಂಜಿಸ್ತಿದೆ.
ಭೀಮ’ ದುನಿಯಾ ವಿಜಯ್ ನಿರ್ದೇಶಿಸಿರುವ ಎರಡನೇ ಸಿನಿಮಾ ಆಗಿದೆ. ‘ಸಲಗ’ ಸಿನಿಮಾ ಮೂಲಕ ಗೆಲುವು ಕಂಡಿರುವ ದುನಿಯಾ ವಿಜಯ್ ಈ ಬಾರಿ ಮತ್ತೊಂದು ಗೆಲುವಿನ ಭರವಸೆಯಲ್ಲಿದ್ದಾರೆ. ಈ ಸಿನಿಮಾ ನೋಡಲು ಕನಿಷ್ಠ 18 ವರ್ಷ ಆಗಿರಬೇಕಾಗಿರುವುದು ಕಡ್ಡಾಯ. ಅದಕ್ಕಿಂತ ಕಡಿಮೆ ವಯಸ್ಸಿನ ದುನಿಯಾ ವಿಜಯ್ ಅಭಿಮಾನಿಗಳು ಈ ಚಿತ್ರವನ್ನು ನೋಡಲು ಸಾಧ್ಯವಿಲ್ಲ. ಯಾಕೆಂದರೆ ಈ ಸಿನಿಮಾಕ್ಕೆ ದೊರಕಿರುವುದು “ಎ” ಸರ್ಟಿಫಿಕೇಟ್.
Post a comment
Log in to write reviews