ಬೆಳಗಾವಿ: ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಇದರಿಂದ ಬೆಳಗಾವಿ ನದಿಗಳಿಗೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಒಂದೇ ವಾರದಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 24 ಮನೆಗಳು ನೀರಿನಿಂದ ಹಾನಿಗೊಳಗಾಗಿವೆ.
ಖಾನಾಪುರ ತಾಲೂಕಿನ ಗ್ರಾಮೀಣ ಹೋಬಳಿಯಲ್ಲಿ 12 ಮನೆಗಳು, ಜಾಂಬೋಟಿ ಹೋಬಳಿಯಲ್ಲಿ 4 ಮನೆಗಳು, ಬೀಡಿ ಹೋಬಳಿಯಲ್ಲಿ ಮೂರು ಮನೆಗಳಿಗೆ, ಗುಂಜಿ ಹೋಬಳಿಯಲ್ಲಿ 3 ಮನೆಗಳಿಗೆ ಹಾನಿಯಾಗಿದೆ ಎಂದು ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ ಮಾಹಿತಿ ನೀಡಿದ್ದಾರೆ.
ಒಂದೆಡೆ ಖಾನಾಪುರದ ಮಲಪ್ರಭಾ, ಪಾಂಡ್ರಿ ನದಿಗಳಿಗೆ ಒಳಹರಿವು ಹೆಚ್ಚಳವಾಗುತ್ತಿದ್ದರೆ, ಗ್ರಾಮಸ್ಥರೆಲ್ಲಾ ಮನೆಗಳು ಬೀಳುವ ಆತಂಕದಲ್ಲಿದ್ದಾರೆ.
ಮಹಾರಾಷ್ಟ್ರ ಮತ್ತು ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಲ್ಲಿ ಒಂದೇ ವಾರದಲ್ಲಿ 10 ಟಿಎಂಸಿ ನೀರು ಹೆಚ್ಚಳವಾಗಿದೆ. ಎರಡು ಜಿಲ್ಲೆಗಳಿಗೆ ಕುಡಿಯುವ ನೀರು ಕೃಷಿಗೆ ಆಧಾರವಾಗಿರುವ ಹಿಡಿಕಲ್ ಡ್ಯಾಂಗೆ ಸದ್ಯ 21 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯದಲ್ಲಿ ಸದ್ಯ 18 ಟಿಎಂಸಿ ಭರ್ತಿಯಾಗಿದೆ. ಇದರಿಂದ ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ರೈತರಲ್ಲಿ ಸಂತಸ ಮೂಡಿದೆ. ಎಂದು ತಹಶೀಲ್ದಾರ್ ಪ್ರಕಾಶ್ ಗಾಯಕ್ವಾಡ ತಿಳಿಸಿದ್ದಾರೆ.
Post a comment
Log in to write reviews