ಈಜಲು ತೆರಳಿದ್ದ ಮೂವರು ಶಾಲಾ ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ರಾಮನಗರದ ಅಚಲು ಗ್ರಾಮದ ಬೆಟ್ಟದ ಸಮೀಪ ಸಂಭವಿಸಿದೆ. ಮೃತರನ್ನು14 ವರ್ಷದ ಸಬಾದ್ , 13 ವರ್ಷದ ಸುಲ್ತಾನ್ ಮತ್ತು 15 ವರ್ಷದ ರಿಯಾಜ್ ಖಾನ್ ಎಂದು ಗುರುತಿಸಲಾಗಿದೆ. ಇವರು ರಾಮನಗರದ ಮೆಹಬೂಬ್ ನಗರದ ನಿವಾಸಿಗಳಾಗಿದ್ದಾರೆ.
ಶಾಲೆಗೆ ರಜೆ ಇದ್ದ ಕಾರಣ 8 ಮಂದಿ ವಿದ್ಯಾರ್ಥಿಗಳು ಅಚ್ಚಲು ಗ್ರಾಮದ ಬಳಿಯ ಬೆಟ್ಟಕ್ಕೆ ಬಂದಿದ್ದಾರೆ. ಈ ಬೆಟ್ಟದಲ್ಲಿ ಸುಮಾರು 10 ಅಡಿ ಆಳದ ನೀರಿನ ಹೊಂಡ ಇದ್ದು, ಇದರಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ. ಈ ಸಂದರ್ಭದಲ್ಲಿ ಈಜು ಬಾರದೇ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರ ಶವವನ್ನು ಅಗ್ನಿಶಾಮಕ ಸಿಬ್ಬಂದಿಗಳು ನೀರಿನಿಂದ ಹೊರಕ್ಕೆ ತೆಗೆದಿದ್ದಾರೆ. ರಾಮನಗರ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Post a comment
Log in to write reviews