ನವದೆಹಲಿ: ಮೂರನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ಬಳಿಕ ನರೇಂದ್ರ ಮೋದಿ ಮೊದಲ ವಿದೇಶಿ ಪ್ರವಾಸ ಕೈಗೊಂಡಿದ್ದಾರೆ. ಇಟಲಿಯಲ್ಲಿ ನಡೆಯಲಿರುವ ಜಿ7 ಶೃಂಗಸಭೆಯಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಲಿವೆ.
ಉಕ್ರೇನ್‌ನಲ್ಲಿ ನಡೆಯುತ್ತಿರುವ ಯುದ್ಧ ಹಾಗು ಗಾಜಾ ಬಿಕ್ಕಟ್ಟು ಸೇರಿ ಜಾಗತಿಕ ಸವಾಲುಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ಇನ್ನು ಈ ಸಭೆಯಲ್ಲಿ ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ,ಜಪಾನ್ ಪ್ರಧಾನಿ ಪುಮಿಯೊಕಿಶಿದಾ, ಕೆನಡಾ ಪ್ರಧಾನಿ ಜಸ್ಟಿನ್ ಟ್ರಡೊ ಭಾಗವಹಿಸಲಿದ್ದಾರೆ.
ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ ರಷ್ಯಾ ಆಕ್ರಮಣದ ಕುರಿತು ಅಧಿವೇಶನದಲ್ಲಿ ಮಾತನಾಡುವ ಸಾಧ್ಯತೆ ಇದೆ.
Post a comment
Log in to write reviews