ಹೆಚ್ಎಂಟಿ ವಶದಲ್ಲಿದ್ದ ಸುಮಾರು 150 ಕೋಟಿ ರೂ. ಮೌಲ್ಯದ 5 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ. ಹೆಚ್ಎಂಟಿ ಬಳಿಯಿರುವ ಎಲ್ಲ ಅರಣ್ಯ ಭೂಮಿ ಮರುವಶಕ್ಕೆ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದ ಬೆನ್ನಲ್ಲೇ ಇದೀಗ ಮರುವಶಕ್ಕೆ ಪಡೆದುಕೊಳ್ಳಲಾಗಿದೆ. ಹೆಚ್ಎಂಟಿ ವಶದಲ್ಲಿದ್ದ ಪೀಣ್ಯ- ಜಾಲಹಳ್ಳಿ ಸರ್ವೆ ನಂ. 1ರಲ್ಲಿ ಇಂದು ಜೆಸಿಬಿಯೊಂದಿಗೆ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ, ಹೆಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಒಟ್ಟೂ 599 ಎಕರೆ ಅರಣ್ಯ ಇದರ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ.
ಇನ್ನು ಈ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದು, ಬೆಂಗಳೂರಿನಲ್ಲಿ ಹಸಿರು ಪ್ರದೇಶವನ್ನು ವೃದ್ಧಿಸಲು, ಹೆಚ್.ಎಂ.ಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನಲ್ಲಿ 5 ಎಕರೆ ಅರಣ್ಯ ಭೂಮಿಯನ್ನು ಇಂದು ಮರು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
Post a comment
Log in to write reviews