ಬೆಳಗಾವಿ: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಕೆರೂರ ಗ್ರಾಮದಲ್ಲಿ ನಡೆದಿದೆ.
ಮೇ 30ರಂದು ಕೆರೂರ ಗ್ರಾಮದ ಬಾಳುಮಾಮಾ ದೇವರ ಜಾತ್ರೆ ನಡೆದಿತ್ತು. ಈ ಜಾತ್ರೆಗೆ ಸಾವಿರಾರು ಜನ ಭಾಗಿಯಾಗಿದ್ದರು. ಈ ವೇಳೆ ಭಕ್ತರಿಗೆ ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನ ಉಳಿದಿದ್ದ ಅಡುಗೆಯನ್ನು ರಾತ್ರಿ 200ಕ್ಕೂ ಹೆಚ್ಚಿನ ಭಕ್ತರಿಗೆ ಬಡಿಸಲಾಗಿತ್ತು. ಅದರಲ್ಲಿ ಮಹಿಳೆಯರು, ಪುರುಷರು, ಮಕ್ಕಳು ಸೇರಿ 50ಕ್ಕೂ ಹೆಚ್ಚು ಭಕ್ತರಿಗೆ ವಾಂತಿ ಭೇದಿ ಶುರುವಾಗಿದೆ. ಅದರಲ್ಲಿ 30 ಭಕ್ತರಿಗೆ ಚಿಕ್ಕೋಡಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 10 ಜನರಿಗೆ ಕೆರೂರ ಗ್ರಾಮದ ಅಂಗವಾಡಿಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. 10 ಜನರಿಗೆ ಯಕ್ಸಂಬಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯಕೀಯ ತಂಡ ಗ್ರಾಮದಲ್ಲಿ ಬೀಡು ಬಿಟ್ಟಿದೆ.
Post a comment
Log in to write reviews