ಒಂದೇ ದಿನದಲ್ಲಿ 51 ಮಂದಿ ಅಪಘಾತದಲ್ಲಿ ಸಾವು ;ಎಚ್ಚರಿಕೆಯಿಂದ ವಾಹನ ಚಲಾಯಿಸಿ:ಎಡಿಜಿಪಿ ಅಲೋಕ್ ಕುಮಾರ್
ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಚಾಲಕರಿಗೆ ಸಂದೇಶ ರವಾನೆ ಮಾಡಿದ್ದಾರೆ.
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಅಪಘಾತ ಪ್ರಕರಣದ ಸಂಬಂಧ ಎಡಿಜಿಪಿ ಈ ಮನವಿ ಮಾಡಿದ್ದು, ಸುರಕ್ಷಿತವಾಗಿ ವಾಹನ ಚಲಾಯಿಸುವಂತ ಕರೆ ನೀಡಿದ್ದಾರೆ. ಅಪಘಾತ ತಡೆಗಟ್ಟಲು ಎಲ್ಲಾ ವಾಹನ ಚಾಲಕರ ಜವಾಬ್ದಾರಿಯುತ ನಡವಳಿಕೆ ಅಗತ್ಯವಿದೆ. ಅಜಾಗರೂತೆಯಿಂದ ವಾಹನ ಚಲಾಯಿಸದಂತೆ ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಬರೆದಿದ್ದಾರೆ.
ರಾಜ್ಯದಲ್ಲಿ ರಸ್ತೆ ಅಪಘಾತಗಳು ಪ್ರತಿದಿನ ಹೆಚ್ಚುತ್ತಿವೆ. ಒಂದು ತಿಂಗಳಲ್ಲಿ ರಾಜ್ಯದೆಲ್ಲೆಡೆ ನಡೆದ ಅಪಘಾತಗಳಲ್ಲಿ ಒಟ್ಟು 51 ಜನರು ಮೃತಪಟ್ಟಿದ್ದಾರೆ.
ಹಾಸನದಲ್ಲಿ ಭಾನುವಾರ ಬೆಳಿಗ್ಗೆ ನಡೆದ ರಸ್ತೆ ಅಫಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಮಗು ಸೇರಿದಂತೆ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಕಾರಳ್ಳಿ ಗ್ರಾಮದ ನಾರಾಯಣಪ್ಪ, ಸುನಂದಾ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಂದರಹಳ್ಳಿ ಗ್ರಾಮದ ನೇತ್ರಾ ಹಾಗೂ ರವಿಕುಮಾರ್ ದಂಪತಿ ಹಾಗೂ ಪುತ್ರ ಚೇತನ್ ಮೃತ ದುರ್ದೈವಿಗಳು.
ಪಾಶ್ವವಾಯುಗೆ ತುತ್ತಾಗಿದ್ದ ನಾರಾಯಣಪ್ಪ ಅವರಿಗೆ ಚಿಕಿತ್ಸೆ ಕೊಡಿಸಲು ಇಟಿಯೋಸ್ ಬಾಡಿಗೆ ಕಾರು ಮಾಡಿಕೊಂಡು ಮಂಗಳೂರಿಗೆ ತೆರಳಿದ್ದರು. ಚಿಕಿತ್ಸೆ ಪಡೆದು ವಾಪಸ್ಸು ಬೆಂಗಳೂರಿನ ಕಡೆಗೆ ಬರುವಾಗ ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಪಕ್ಕದ ಲೇನ್ಗೆ ಹಾರಿ ಕಂಟೇನರ್ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ.
ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 23ರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟಿದ್ದು, 6 ಜನ ಗಾಯಗೊಂಡಿದ್ದರು. ಅಜಾಗರೂಕತೆ ಚಾಲನೆಯೇ ಈ ಅಪಘಾತಕ್ಕೆ ಕಾರಣ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.
Post a comment
Log in to write reviews