Samayanews.

Samayanews.

2024-12-23 11:54:32

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೇರಳ ಭೂಕುಸಿತದಲ್ಲಿ 7 ಮಂದಿ ಕನ್ನಡಿಗರು ಸಾವು : 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

ಚಮರಾಜನಗರ : ಕೇರಳದಲ್ಲಿ ಉಂಟಾಗಿರುವ ಭೂ ಕುಸಿತದಲ್ಲಿ ಒಟ್ಟು 7 ಮಂದಿ ಕನ್ನಡಿಗರು ಸಾವನ್ನಪ್ಪಿದ್ದಾರೆ ಐವರ ಶವಗಳು ಪತ್ತೆಯಾಗಿವೆ.‌ ಚಾಮರಾಜನಗರದ ಮೂಲದ ನಾಲ್ವರು, ಮಂಡ್ಯ ಜಿಲ್ಲೆಯ ಮೂವರು ಸಾವನ್ನಪ್ಪಿರುವುದಾಗಿ ಗುಂಡ್ಲುಪೇಟೆ ತಹಶಿಲ್ದಾರ್ ರಮೇಶ್ ಬಾಬು ತಿಳಿಸಿದ್ದಾರೆ.

ಮಂಗಳವಾರ ಚಾಮರಾಜನಗರದ ಪುಟ್ಟಸಿದ್ದಿ, ರಾಣಿ ಎಂಬವರ ಮೃತದೇಹಗಳು ಪತ್ತೆಯಾಗಿದ್ದವು. ಇಂದು ಮಂಡ್ಯ ಮೂಲದ ಮೂವರ ಶವಗಳು ಪತ್ತೆಯಾಗಿವೆ. ಕಣ್ಮರೆಯಾಗಿದ್ದ ಮಳವಳ್ಳಿ ಮೂಲದ 9 ಮಂದಿಯಲ್ಲಿ ಸಾವಿತ್ರಿ ಎಂಬವರ ಮೊಮ್ಮಗ, ಸಬಿತಾ ಮಗ ಅಚ್ಚು ಹಾಗೂ ಶ್ರೀಕುಟ್ಟಿ ಎಂಬವರು ಮೃತಪಟ್ಟಿದ್ದಾರೆ. ವೈತ್ರಿ ಆಸ್ಪತ್ರೆಯಲ್ಲಿ ಇವರ ಶವಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನು ಚಾಮರಾಜನಗರ ತಾಲೂಕಿನ‌ ಇರಸವಾಡಿ ಮೂಲದ‌ ರಾಜನ್ ಮತ್ತು ರಜಿನಿ ದಂಪತಿ ಮೃತಪಟ್ಟಿದ್ದು, ಶವಗಳು ಪತ್ತೆಯಾಗಬೇಕಿದೆ. ಒಟ್ಟಾರೆಯಾಗಿ 7 ಮಂದಿ ಕನ್ನಡಿಗರು ಕೇರಳ ಭೂ ಕುಸಿತದಲ್ಲಿ ಪ್ರಾಣ ಕಳೆದುಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.

ಕನ್ನಡಿಗರ ಪತ್ತೆಗೆ ತೀವ್ರ ಶೋಧ ಕಾರ್ಯ: ಕೇರಳ‌ ವಯನಾಡ್​ ಗುಡ್ಡ ಕುಸಿತ ಪ್ರಕರಣದಲ್ಲಿ ಸಿಲುಕಿರುವ ಕನ್ನಡಿಗರ ಗುರುತು ಪತ್ತೆ ಮತ್ತು ರಕ್ಷಣಾ ಕಾರ್ಯವನ್ನು ತೀವ್ರವಾಗಿ ನಡೆಸಲಾಗುತ್ತಿದೆ. ಆಸ್ಪತ್ರೆ ಮತ್ತು ಕಾಳಜಿ ಕೇಂದ್ರಗಳಿಗೆ ತಹಶಿಲ್ದಾರ್ಗಳ ತಂಡಗಳು ಭೇಟಿ ನೀಡುತ್ತಿವೆ. ಚಾಮರಾಜನಗರ ತಹಶಿಲ್ದಾರ್ ಗಿರಿಜಮ್ಮ‌ ಮತ್ತು ಗುಂಡ್ಲುಪೇಟೆ ತಹಶಿಲ್ದಾರ್ ರಮೇಶ್ ಬಾಬು ತಂಡಗಳು ಪ್ರತ್ಯೇಕವಾಗಿ ವೈತ್ರಿ ತಾಲೂಕು ಕೇಂದ್ರ ಮತ್ತು ಇತರೆ ಕಡೆ ತೆರೆದಿರುವ ಕಾಳಜಿ ಕೇಂದ್ರಗಳು, ಆಸ್ಪತ್ರೆಗಳಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಚಾಮರಾಜನಗರ ಸೇರಿದಂತೆ ಕರ್ನಾಟಕದವರ ಗುರುತು ಪತ್ತೆ ಹಾಗೂ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದವರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಇದಕ್ಕಾಗಿ ಬತ್ತೇರಿಯಲ್ಲಿ ಎರಡು ಬಸ್​ಗಳನ್ನು ನಿಯೋಜನೆ ಮಾಡಲಾಗಿದೆ. ಸಂಜೆ ಹೊತ್ತಿಗೆ ಕನ್ನಡಿಗರನ್ನು ಕರೆತರುವ ನಿರೀಕ್ಷೆ ಇದ್ದು, ಎಲ್ಲರನ್ನೂ ಒಟ್ಟಿಗೆ ಕರೆತರಲು ನಿರಂತರ ಮಳೆ ಅಡ್ಡಿಯಾಗಿದೆ.

ಲಕ್ಷ ಪರಿಹಾರ ಘೋಷಿಸಿದ ಸಿಎಂ: ''ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಸಿಎಂ, ''ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ. ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ'' ಎಂದಿದ್ದಾರೆ.

 

img
Author

Post a comment

No Reviews