ಕೆಎಂಡಿಸಿ ಯಿಂದ 7616 ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ 72.78 ಕೋಟಿ ರೂ. ಸಾಲ
ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವೃತ್ತಿಪರ ಶಿಕ್ಷಣದ ವ್ಯಾಸಂಗಕ್ಕಾಗಿ 72.78 ಕೋಟಿ ರೂ.ಶಿಕ್ಷಣ ಸಾಲ ನೀಡಲಾಗಿದೆ.
ಕೆಎಂಡಿಸಿ ಕಚೇರಿಯಲ್ಲಿ ಮಂಗಳವಾರ ಪ್ರಗತಿ ಪರಿಶೀಲನೆ ನಡೆಸಿ ಸುದ್ಧಿಗಾರರ ಜತೆ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ವೈದ್ಯಕೀಯ, ದಂತ ವೈದ್ಯಕೀಯ,ಆಯುಷ್, ಫಾರ್ಮಸಿ ಹಾಗೂ ಎಂಜಿನಿಯರಿಂಗ್ ಕೋರ್ಸ್ ವ್ಯಾಸಂಗ ಮಾಡಲು ಬಯಸಿದ ಬಡ ಕುಟುಂಬಗಳ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಗರಿಷ್ಠ ಐದು ಲಕ್ಷ ರೂ. ವರೆಗೆ ಸಾಲದ ಸೌಲಭ್ಯ ಒದಗಿಸಲಾಗಿದೆ. ಇದರ ಜತೆಗೆ ವಿದೇಶದಲ್ಲಿ ವ್ಯಾಸಂಗ ಮಾಡಲು 88 ವಿದ್ಯಾರ್ಥಿಗಳಿಗೆ ಗರಿಷ್ಠ 10 ಲಕ್ಷ ರೂ. ಸಾಲ ನೀಡಲಾಗಿದ್ದು, ಒಟ್ಟು7.5 ಕೋಟಿ ರೂ. ಸಾಲ ನೀಡಲಾಗಿದೆ ಎಂದು ವಿವರಿಸಿದರು.
ಅಲ್ಪಸಂಖ್ಯಾತರ ಸಮುದಾಯದ ಮಕ್ಕಳು ವೃತ್ತಿಪರ ಶಿಕ್ಷಣ ಪಡೆಯಲು ಇದರಿಂದ ಸಹಕಾರಿಯಾಗಲಿದೆ. ಮುಖ್ಯಮಂತ್ರಿಯವರ ಸಲಹೆ ಮೇರೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ಮೊದಲ ಬಾರಿಗೆ ಸಣ್ಣ ವ್ಯಾಪಾರ ಮಾಡುವ ಮಹಿಳೆಯರಿಗೆ ವಿಶೇಷ ಯೋಜನೆಯಡಿಯಲ್ಲಿ 961 ಮಂದಿಗೆ 4.8 ಕೋಟಿ ರೂ. ಸಾಲ ನೀಡಲಾಗಿದ್ದು, ಇದರಲ್ಲಿ ಶೇ. 50ರಷ್ಟು ಸಬ್ಸಿಡಿ, ಉಳಿದ ಶೇ. 50 ರಷ್ಟು ಸಾಲ. ವೃತ್ತಿ ಪ್ರೋತ್ಸಾಹ ಯೋಜನೆಯಡಿ 973 ಮಂದಿಗೆ 9.73 ಕೋಟಿ ರೂ. ಶ್ರಮ ಶಕ್ತಿ ಯೋಜನೆ ಯಡಿ 1000 ಮಂದಿಗೆ 5 ಕೋಟಿ ರೂ. ಸಾಲ ಒದಗಿಸಲಾಗಿದೆ ಈ ವರ್ಷ 200.60 ಕೋಟಿ ರೂ. ಸಾಲ ವಸೂಲಾತಿ ಮಾಡಿದ್ದು, ಕಳೆದ ವರ್ಷಕ್ಕಿಂತ 50 ಲಕ್ಷ ಹೆಚ್ಚು ವಸೂಲಾತಿ ಮಾಡಲಾಗಿದೆ ಸಾಲ ವಸೂಲಾತಿ ಪ್ರಮಾಣ ಹೆಚ್ಚಿಸಿ. ಇದರಿಂದ ಪ್ರತಿವರ್ಷ ಹೆಚ್ಚು ಹೆಚ್ಚು ವಿದ್ಯಾರ್ಥಿಗಳಿಗೆ ಸಾಲ ನೀಡಲು ಸಹಕಾರಿಯಾಗುತ್ತದೆ, ಈ ವರ್ಷದ ಬಜೆಟ್ ನಲ್ಲಿ ಘೋಷಿಸಿರುವ ನಾಲ್ಕು ಹೊಸ ಯೋಜನೆ ಪರಿಣಾಮಕಾರಿಯಾಗಿ ಜಾರಿ ಗೊಳಿಸಲು ಈಗಲೇ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದರು .
Post a comment
Log in to write reviews