Samayanews.

Samayanews.

2024-12-24 12:31:53

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತಜ್ಞರಿಗೆ ತಲೆನೋವಾದ ಕೇಸ್‌- ಇನ್ನೂ ಪತ್ತೆಯಾಗದ ರಕ್ತದ ಕಲೆ…!

ಸಿಲಿಕಾನ್‌ ಸಿಟಿ ನಗರದ ಜನರನ್ನು ಬೆಚ್ಚಿ ಬೀಳಿಸಿದ ಒಂಟಿ ಮಹಿಳೆ ಮಹಾಲಕ್ಷ್ಮಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ವೈಯಾಲಿಕಾವಲ್ ಪೊಲೀಸರು ಮಾಡುತ್ತಿದ್ದು, ಈಗಾಗಲೇ ಅನುಸ್ಪದ ವ್ಯಕ್ತಿಗಳನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. 
ವೈಯಾಲಿಕಾವಲ್ನಲ್ಲಿ ವಾಸವಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣ ವಿಧಿ ವಿಜ್ಞಾನ ಪ್ರಯೋಗಾಲಯ ತಜ್ಞರಿಗೆ ತಲೆ ನೋವಾಗಿ ಪರಿಣಮಿಸಿದೆ. ಕೊಲೆಯಾದ ಮಹಾಲಕ್ಷ್ಮೀ ವಾಸವಿದ್ದ ಮನೆಯನ್ನು ಸಂಪೂರ್ಣವಾಗಿ ಪರಿಶೀಲನೆ ನಡೆಸಿದರೂ ಎಫ್ಎಸ್ಎಲ್ ತಜ್ಞರಿಗೆ ಯಾವುದೇ ರಕ್ತದ ಕಲೆಗಳು ಮತ್ತು ದೇಹ ಕತ್ತರಿಸಿದ ಸ್ಥಳದ ಗುರುತುಗಳು ಪತ್ತೆಯಾಗಿಲ್ಲ. ಕೊಲೆ ಆರೋಪಿ ಯಾವುದೇ ಗುರುತು ಸಿಗದಂತೆ ಮನೆಯನ್ನು ಸಂಪೂರ್ಣ ಸ್ವಚ್ಛ ಮಾಡಿ, ಪರಾರಿಯಾಗಿದ್ದಾನೆ.

ಇನ್ನೂ ಕೊಲೆ ನಡೆದ ಸ್ಥಳದಲ್ಲಿ, ರಕ್ತ ಕಾಣಬಾರದೆಂದು ಸ್ವಚ್ಛ ಮಾಡಿದ ಮೇಲೂ ಕಲೆಗಳನ್ನು ಪತ್ತೆ ಹಚ್ಚಬಹುದು. ತಜ್ಞನರು ಲುಮಿನಾಲ್ ಎಂಬ ಕೆಮಿಕಲ್ ಬಳಸಿ ರಕ್ತದ ಕಲೆಗಳನ್ನು ಪತ್ತೆ ಹಚ್ಚುತ್ತಾರೆ. ಆದರೆ, ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಲುಮಿನಾಲ್ ಕೆಮಿಕಲ್ ಬಳಸಿದರೂ ರಕ್ತದ ಕಲೆಗಳು ಪತ್ತೆಯಾಗಿಲ್ಲ. ಇಷ್ಟೇಲ್ಲದರ ನಡೆವೆಯೂ ಪೊಲೀಸರು ಕೊಲೆ ಆರೋಪಿಯನ್ನು ಪತ್ತೆ ಹಚ್ಚುತ್ತಾರೆ ಎಂದು ಕಾದು ನೋಡಬೇಕಾಗಿದೆ…?

img
Author

Post a comment

No Reviews