ತಾನು ಮಾಡಿದ್ದ ಸಾಲವನ್ನು ತೀರಿಸಲು ಆಗಲೇ ಮೂರು ತಿಂಗಳ ಹೆತ್ತ ಕಂದಮ್ಮನನ್ನೇ ಮಾರಾಟ ಮಾಡಿರುವ ಅಮಾನವೀಯ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಹೌದು ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರದ ನಿವಾಸಿಗಳಾದ ಮುನಿರಾಜು ಹಾಗೂ ಪವಿತ್ರ ಎನ್ನುವ ದಂಪತಿಗಳ ಮೂರು ತಿಂಗಳ ಮಗು ವನ್ನು ತಂದೆ ಮುನಿರಾಜು ಹಣಕ್ಕಾಗಿ ಮಾರಾಟ ಮಾಡಿದ್ದಾನೆ ಎಂದು ಪತ್ನಿ ಪವಿತ್ರ ಗಂಡನ ವಿರುದ್ಧ ಬಂಗಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
Post a comment
Log in to write reviews