Samayanews.

Samayanews.

2024-12-23 11:52:06

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಖಾಸಗಿ ವಸತಿ ಗೃಹದಲ್ಲಿ ಮುಖ್ಯ ಶಿಕ್ಷಕರೊಬ್ಬರು ಆತ್ಮಹತ್ಯೆ

ಹಾಸನ: ಖಾಸಗಿ ವಸತಿ ಗೃಹದಲ್ಲಿ ಮುಖ್ಯ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಿಗ್ಗೆ 9 ಗಂಟೆಗೆ ನಗರದ ಬಿ.ಎಂ. ರಸ್ತೆ ಬಳಿ ಇರುವ ಗೋಕುಲ ವಸತಿ ಗೃಹದಲ್ಲಿ ನಡೆದಿದೆ.

ರಂಗಸ್ವಾಮಿ (57) ಆತ್ಮಹತ್ಯೆ ಮಾಡಿಕೊಂಡ ಮುಖ್ಯೋಪಾಧ್ಯಾಯ. ನಗರದ ಹೌಸಿಂಗ್​ ಬೋರ್ಡ್​ನಲ್ಲಿ ವಾಸವಾಗಿರುವ ಇವರು, ಬೇಲೂರು ತಾಲೂಕು ತೊಳಲು ಗ್ರಾಮದ ಸರಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು.

ಭಾನುವಾರ ಬೆಳಗ್ಗೆ ತಮ್ಮ ಕುಟುಂಬದೊಂದಿಗೆ ಮೊಬೈಲ್​ ಕರೆ ಮೂಲಕ ಮಾತನಾಡಿದ್ದಾರೆ. ನಂತರದಲ್ಲಿ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಈ ನಿರ್ಧಾರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿ, ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

img
Author

Post a comment

No Reviews