ದಾವಣಗೆರೆ: ಮದ್ಯ ಸೇವಿಸುತ್ತಾ ಕುಳಿತಿದ್ದ ವ್ಯಕ್ತಿಯನ್ನು ಮನಸೋಇಚ್ಛೆ ಚೂರಿಯಿಂದ ಚುಚ್ಚಿ ಕೊಲೆಗೈದಿದ್ದ ಘಟನೆಯು ಇತ್ತೀಚೆಗೆ ಬಾರ್ವೊಂದರಲ್ಲಿ ನಡೆದಿದ್ದು, ಹಿಂದಿನ ಕಾರಣ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ. ಕೊಲೆಯಾದ ವ್ಯಕ್ತಿ ಹನುಮಂತ ಅಲಿಯಾಸ್ ಕುಮಾರ್ ತನ್ನ ಸಹೋದರಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಲ್ಲದೇ ಕೆಲವು ಖಾಸಗಿ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಆತನನ್ನು ಕೊಲೆ ಮಾಡಿರುವುದಾಗಿ ಬಂಧಿತ ಆರೋಪಿ ಗೌತಮ್ ಪವಾರ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಎಸ್ಪಿ ಉಮಾ ಪ್ರಶಾಂತ್, "ಸೆ.21ರಂದು ಕೆಟಿಜೆ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಗೌತಮ್ ಪವಾರ್ (36) ಎಂಬಾತ ಹನುಮಂತ ಅಲಿಯಾಸ್ ಕುಮಾರ್ (30)ನನ್ನು ಚಾಕು ಇರಿದು ಕೊಲೆ ಮಾಡಿದ್ದ. ಗಾಯಾಳು ಆಸ್ಪತ್ರೆಗೆ ಸಾಗಿಸುವಾಗಲೇ ಕೊನೆಯುಸಿರೆಳೆದಿದ್ದ ಎಂದು ಹೇಳಿದ್ದಾರೆ ಎನ್ನಲಾಗಿದೆ.
Post a comment
Log in to write reviews