ಬೆಂಗಳೂರು : ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತವಾಗಿದೆ ಅಪಘಾತದಲ್ಲಿ ಕಾರು ಫುಲ್ ಘಟನೆಯಲ್ಲಿ ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವ ನಟ ಕಿರಣ್ ರಾಜ್ಗೆ ಚಿಕಿತ್ಸೆ ಮುಂದುವರೆದಿದ್ದು, ಕಿರಣ್ ರಾ!ಜ್ ಎದೆ ಕೈ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕೆಂಗೇರಿ ಹತ್ತಿರದ ಬೆಂಗಳೂರು ಹಾಸ್ಪಿಟಲ್ ನಲ್ಲಿ ನಟನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಸೀಟ್ ಬೆಲ್ಟ್ ನಿಂದಾಗಿ ಸೇಫ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಿರಣ್ ರಾಜ್ ಅವರ ಸಿನಿಮಾ ರಾನಿ ನಾಳೆ ರಿಲೀಸ್ ಆಗಲಿದೆ. ಸಿನಿಮಾದ ಬಗ್ಗೆ ಸಾಕಷ್ಟು ಆಸೆ ಕನಸ್ಸುಗಳನ್ನು ಇಟ್ಟುಕೊಂಡಿದ್ದ ನಟ ಕಿರಣ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು ಅಭಿಮಾನಿಗಳಿಗೆ ನೋವನ್ನುಂಟು ಮಾಡಿದೆ.
Post a comment
Log in to write reviews