ಹುಬ್ಬಳ್ಳಿಯಲ್ಲಿ ಹತ್ಯೆಯಾದ ಅಂಜಲಿ ಸಹೋದರಿಯರ ಓದಿನ ಸಂಪೂರ್ಣ ಜವಬ್ದಾರಿಯನ್ನು ಬಾಲೆಹೊಸೂರು ಹಾಗೂ ಶಿರಹಟ್ಟಿ ಸಂಸ್ಥಾನ ಮಠಗಳು ಹೊರಲಿವೆ ಎಂದು ಶಿರಹಟ್ಟಿ ಪಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ.
ಮೃತ ಅಂಜಲಿ ಮನೆಗೆ ಭೆಟಿನೀಡಿ ಸಂತ್ವಾನ ಹೇಳಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಇ ಇಬ್ಬರು ಯುವತಿಯರ ಹಿತದೃಷ್ಠಿಯಿಂದ ದತ್ತು ಪಡೆಯುತ್ತೇವೆ ಎಂದು ಬರವಸೆ ನೀಡಿದರು.
ಅಂಜಲಿ ಸಾವಿಗೆ ನ್ಯಾಯ ಕೊಡಿಸುವಂತೆ ಪ್ರತಿಭಟನೆ
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಪೊಲೀಸರ ವೈಫಲ್ಯ ನಿಜಕ್ಕೂ ಈ ಒಂದು ಕೊಲೆಗೆ ಕಾರಣವಾಗಿದೆ. ಓದಲು ಹೋಗುವ ಯುವತಿ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದರೂ ನಿರ್ಲಕ್ಷ್ಯ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಅಂಜಲಿ ಸಾವಿಗೆ ನ್ಯಾಯ ಕೊಡಿಸುವ ಕಾರ್ಯವನ್ನು ಎಲ್ಲರೂ ಮಾಡಬೇಕು. ಈ ನಿಟ್ಟಿನಲ್ಲಿ ಮೇ 17ರಂದು (ಇಂದು) ದೊಡ್ಡಮಟ್ಟದ ಪ್ರತಿಭಟನೆ ಕೂಡ ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಮೀಜಿ ಹೇಳಿದರು.
.
Post a comment
Log in to write reviews