ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳಿಗೆ 24ನೇ ಎಸಿಎಂಎಂ ನ್ಯಾಯಾಲಯ 13 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಆರೋಪಿಗಳಾದ ನಟ ದರ್ಶನ್, ವಿನಯ್, ಧನರಾಜ್, ಪ್ರದೂಷ್ ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಸರ್ಕಾರಿ ವಿಶೇಷ ಅಭಿಯೋಜಕರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡುವಂತೆ ರಿಮ್ಯಾಂಡ್ ಅರ್ಜಿ ಸಲ್ಲಿಸಿದರು.
ಇಂದು ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಚಾಟ್ಲಾ ಅವರು ಆರೋಪಿಗಳಾದ ದರ್ಶನ್, ವಿನಯ್, ಧನರಾಜ್, ಪ್ರದೂಷ್ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಈ ಮೂಲಕ ದರ್ಶನ್ ಮತ್ತು ಗುಂಪನ್ನು ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಯಿತು.
ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಬೆಂಬಲಿಗರನ್ನು ಬಂಧಿಸಿದ್ದ ವಿಜಯನಗರ ಉಪವಿಭಾಗದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ 13 ದಿನಗಳ ಕಾಲ ವಶಕ್ಕೆ ಪಡೆದಿದ್ದಾರೆ.
Post a comment
Log in to write reviews