ಮಂಡ್ಯ: ಕುಮಾರಸ್ವಾಮಿ ಗೆದ್ದು ಸಚಿವರಾದರೆ ಮಂಡಿ ಸೇವೆ ಮಾಡುತ್ತೇನೆ ಎಂದು ಹರಕೆ ಹೊತ್ತಿದ್ದ ಅಭಿಮಾನಿಯೊಬ್ಬ ತನ್ನ ಹರಕೆಯನ್ನು ತೀರಿಸಿದ್ದಾನೆ. ಚಿಕ್ಕಮಂಡ್ಯ ಗ್ರಾಮದ ಸಿ.ಎಸ್.ಲೋಕೇಶ್ ಮೇಲುಕೋಟೆಯಲ್ಲಿ ಮಂಡಿಸೇವೆ ಮೂಲಕ ಬೆಟ್ಟವನ್ನೇರಿ ಶ್ರೀ ಯೋಗಾನರಸಿಂಹಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದ್ದಾನೆ.
ಲೋಕೇಶ್ ಇಂದು ಮುಂಜಾನೆ ಸ್ನೇಹಿತ ಚಂದನ್ ಜಾಕ್ ಅವರೊಂದಿಗೆ ಮಂಡ್ಯದಿಂದ ಮೇಲುಕೋಟೆಗೆ ಬೈಕ್ನಲ್ಲಿ ತೆರಳಿ, ಯೋಗಾನರಸಿಂಹಸ್ವಾಮಿ ಬೆಟ್ಟದ ಸುಮಾರು 400 ಮೆಟ್ಟಿಲುಗಳನ್ನು ಮಂಡಿಗಾಲುಗಳಿಂದಲೇ ಹತ್ತಿ, ಹರಕೆ ತೀರಿಸಿದ್ದಾನೆ. ಹಾಗೆಯೇ ಎಚ್ಡಿಕೆ ಅವರ ಆರೋಗ್ಯ ಮತ್ತು ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾರ್ಥಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಚನೆ ಮಾಡಿಸಿ ಸಂಕಲ್ಪ ಮಾಡಿಸಿದ್ದಾನೆ.
ಎಚ್ಡಿಕೆ ಗೆಲುವಿನ ಬಗ್ಗೆ ಸ್ನೇಹಿತರೊಂದಿಗೆ ಮಾತನಾಡುತ್ತಿದ್ದೆ. ಆಗ ಎಚ್ಡಿಕೆ ಗೆದ್ದರೆ ಏನು ಮಾಡುತ್ತೀಯಾ? ಎಂದು ಸ್ನೇಹಿತರು ಪ್ರಶ್ನಿಸಿದರು. ತಡ ಮಾಡದೆ ನಾನು ಇದೇ ಮೇಲುಕೋಟೆಗೆ ಬಂದು ಮಂಡಿಸೇವೆ ಮೂಲಕ ಬೆಟ್ಟ ಹತ್ತಿ ದೇವರಿಗೆ ಪೂಜೆ ಸಲ್ಲಿಸುತ್ತೇನೆ ಎಂದಿದ್ದೆ. ಅದರಂತೆ ಈಗ ಕುಮಾರಣ್ಣ ಗೆದ್ದು, ಸೆಂಟ್ರಲ್ ಮಿನಿಸ್ಟರ್ ಆಗಿದ್ದಾರೆ. ಹೀಗಾಗಿ ಮಂಡಿಸೇವೆ ಮೂಲಕ ಹರಕೆ ತೀರಿಸಿದ್ದೇನೆ ಎಂದು ಎಚ್ಡಿಕೆ ಅಭಿಮಾನಿ ಸಿ.ಎಸ್.ಲೋಕೇಶ್ ತಿಳಿಸಿದ್ದಾರೆ.
Post a comment
Log in to write reviews