ಹೈದರಾಬಾದ್ : ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ಆಡಳಿತರೂಢ ವೈಎಸ್ಆರ್ ಕಾಂಗ್ರೆಸ್ಗೆ ಹೀನಾಯ ಸೋಲುಂಟಾಗಿದೆ. ಇನ್ನೊಂದೆಡೆ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ, ಪವನ್ ಕಲ್ಯಾಣ ನೇತೃತ್ವದ ಜನಸೇನಾ ಹಾಗೂ ಬಿಜೆಪಿ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದೆ.
175 ಸದಸ್ಯ ಬಲ ಹೊಂದಿರುವ ಆಂಧ್ರಪ್ರದೇಶ ವಿಧಾನಸಭೆಯಲ್ಲಿ ತೆಲುಗು ದೇಶಂ, ಜನಸೇನಾ ಹಾಗೂ ಬಿಜೆಪಿ ಮೈತ್ರಿಕೂಟ 162 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಕೇವಲ 13 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಸರಳ ಬಹುಮತಕ್ಕೆ 88 ಸ್ಥಾನಗಳ ಅಗತ್ಯವಿದ್ದು, ತೆಲುಗು ದೇಶಂ, ಜನಸೇನಾ ಹಾಗೂ ಬಿಜೆಪಿ ಮೈತ್ರಿಕೂಟ ಸುಸೂತ್ರವಾಗಿ ಅಧಿಕಾರದ ಸೂತ್ರ ಹಿಡಿಯಲಿದೆ.
ಇನ್ನೊಂದೆಡೆ ಲೋಕಸಭಾ ಚುನಾವಣೆಯಲ್ಲಿಯೂ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ 3 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನೊಂದೆಡೆ ಎನ್‌ಡಿಎ ಮೈತ್ರಿಕೂಟ 22 ಲೋಕಸಭಾ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ.
Post a comment
Log in to write reviews