ಪ್ಯಾರಿಸ್: ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ 2024ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಪ್ಯಾರಿಸ್ ಕ್ರೀಡಾಕೂಟದ 14 ನೇ ದಿನದ ಕಂಚಿನ ಪದಕಕ್ಕಾಗಿ ಚಾಂಪ್ ಡಿ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಪೋರ್ಟೊ ರಿಕೊದ ಡೇರಿಯನ್ ಟೊಯಿ ಕ್ರೂಜ್ ಅವರನ್ನು ಸೋಲಿಸಿ ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕವನ್ನು ಪಡೆದರು.
ಸೆಮಿಫೈನಲ್ನಲ್ಲಿ ಜಪಾನ್ನ ಹಿಗುಚಿ ರೇ ವಿರುದ್ಧ 10-0 ಅಂತರದಿಂದ ಹೀನಾಯ ಸೋಲನುಭವಿಸಿದ 21 ವರ್ಷದ ಅಮನ್ ಸೆಹ್ರಾವತ್ 13-5 ಅಂತರದಲ್ಲಿ ಡೇರಿಯನ್ ಕ್ರೂಜ್ ಅವರನ್ನು ಸೋಲಿಸುವ ಮೂಲಕ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದ ಐದನೇ ಭಾರತೀಯ ಕುಸ್ತಿಪಟು ಹಾಗೂ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಎಂಟನೇ ಪದಕ ಗೆದ್ದುಕೊಟ್ಟ ಹೆಗ್ಗಳಿಕೆ ಪಾತ್ರರಾಗಿದ್ದಾರೆ ಪುರುಷರ 57 ಕೆ.ಜಿ. ಫ್ರೀಸ್ಟೈಲ್ ಕುಸ್ತಿ ಪಂದ್ಯದಲ್ಲಿ ಅಮನ್ ಸೆಹ್ರಾವತ್ ಈ ಸಾಧನೆ ಮಾಡಿದ್ದಾರೆ.
Post a comment
Log in to write reviews