ಬೆಂಗಳೂರು: ಪ್ರತಿ ಇಲಾಖೆಯ ಅಧಿಕಾರಿ ಹಾಗೂ ನೌಕರರು ಪ್ರತಿ ಸೋಮವಾರದಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು ಜನರಿಗೆ ಸರ್ಕಾರಿ ಸೇವೆಗಳನ್ನು ಒದಗಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ವಿಮಲಾಕ್ಷಿ. ಬಿ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಈ ಆದೇಶ ಹೊರಡಿಸಿದ್ದಾರೆ.
ಪ್ರತಿ ಸೋಮವಾರದಂದು ತಾಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿರಬೇಕು. ಅಲ್ಲಿಗೆ ಬರುವ ಜನರ ಕೆಲಸಗಳನ್ನು ಮಾಡಬೇಕು. ಕೃಷಿ ಸಂಬಂಧಿತ ವಿಚಾರವಾಗಿ ಜನರು ಹೆಚ್ಚಾಗಿ ಬರುತ್ತಿದ್ದರಿಂದ ಕೆಲ ಸಮಯಗಳಲ್ಲಿ ಅಧಿಕಾರಿಗಳು, ನೌಕರರು ಸೇವೆಗೆ ಬರುವ ಪ್ರಮಾಣದಲ್ಲಿ ಸ್ವಲ್ಪ ಮಟ್ಟಿಗೆ ಏರು ಪೇರಾಗಿತ್ತು.
ಈ ಸಂಬಂಧ ಪ್ರತಿ ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರದಂದು ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು, ಕರ್ತವ್ಯ ನಿರ್ವಹಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಈ ಸಂಬಂಧ ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಸಕಾರಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ಸ್ಪಂದಿಸಿ, ಅಗತ್ಯ ಕ್ರಮವಹಿಸಲು ಸೂಚನೆ ನೀಡಿದ್ದಾರೆ.
Post a comment
Log in to write reviews