ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ವಿಶೇಷ ವೇತನ ಪ್ಯಾಕೇಜ್ ನೀಡಲು ಬ್ಯಾಂಕ್ ಆಫ್ ಬರೋಡಾ ಮತ್ತು ಕನಾ೯ಟಕ ಪೊಲೀಸರು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಈ ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್ ಮತ್ತು ಬ್ಯಾಂಕ್ ನ ಪ್ರತಿನಿಧಿಗಳು ಭಾಗವಹಿಸಿದ್ದು, ಮೇ 14 ರಂದು ಎಂಒಯುಗೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮಾತನಾಡಿ, 'ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬಗಳ ಆರ್ಥಿಕ ಮತ್ತು ಸಾಮಾಜಿಕ ಅಗತ್ಯಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈ ಸಹಯೋಗವು ಮಹತ್ವದ ಹೆಜ್ಜೆಯಾಗಿದೆ. ನಮ್ಮ ಸಿಬ್ಬಂದಿಗೆ ಸಾಧ್ಯವಾದಷ್ಟು ಉತ್ತಮವಾದ ಸಂಪನ್ಮೂಲಗಳು ಮತ್ತು ಬೆಂಬಲ ದೊರೆಯುತ್ತದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದರು.
Post a comment
Log in to write reviews