ಶಿವಮೊಗ್ಗ : ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ರಂಜಿತಾ (22) ಮೃತಪಟ್ಟ ಮಹಿಳೆ ಎಂದು ತಿಳಿದು ಬಂದಿದೆ.
ರಂಜಿತಾ ಮೇವು ತರಲು ಗದ್ದೆಗೆ ತೆರಳಿದ್ದ ವೇಳೆ ಪೊದೆಯಲ್ಲಿದ್ದ ಹಾವು ಕಚ್ಚಿದ್ದರಿಂದ ಈ ದುರಂತ ಸಂಭವಿಸಿದೆ. ಹಾವು ಕಚ್ಚಿದು ರಂಜಿತಾ ಗಮನಕ್ಕೆ ಬಂದಿಲ್ಲ. ಕೆಲಹೊತ್ತಿನ ಬಳಿಕ ಕುಟುಂಬಸ್ಥರು ನೋಡಿದಾಗ ಗದ್ದೆಯಲ್ಲಿ ರಂಜಿತಾ ಕುಸಿದು ಬಿದ್ದಿದ್ದಳು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಬಾಣಂತಿ ರಂಜಿತಾ ಮೃತಪಟ್ಟಿದ್ದಾರೆ. ಸದ್ಯ ರಂಜಿತಾಗೆ 4 ತಿಂಗಳ ಹಸುಗೂಸು ಇದ್ದು, 3 ವರ್ಷದ ಹೆಣ್ಣು ಮಗು ಸಹ ಇದೆ. ಇನ್ನು ಆಸ್ಪತ್ರೆಯ ಬಳಿ ರಂಜಿತಾ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
Post a comment
Log in to write reviews