ನಗರವನ್ನು ಸುಂದರ ಗೊಳಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಬಿಬಿಎಂಪಿ ಹೊಸದೊಂದು ಅಭಿಯಾನ ಆರಂಭಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹಿರಾತುಗಳ ತೆರವು ಹಾಗೂ ಅವುಗಳನ್ನು ನಿಯಂತ್ರಿಸಲು "ಜಾಹಿರಾತು ಮುಕ್ತ ಅಭಿಯಾನ" ಆರಂಭಿಸಿದೆ.
ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಬಿಬಿಎಂಪಿಯ ಹೊರಾಂಗಣ ಜಾಹಿರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು 2018" ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹಿರಾತು ಇನ್ನಿತರೆ ಸಣ್ಣಪುಟ್ಟ ಜಾಹಿರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ, ಖಾಸಗಿ ಸ್ವತ್ತುಗಳಲ್ಲಿ ಜಾಹಿರಾತು ಫಲಕಗಳನ್ನು ಅಳವಡಿಸಿ ವಾಣಿಜ್ಯ ಜಾಹಿರಾತುಗಳನ್ನು ಪ್ರದರ್ಶಿಸುವುದನ್ನು, ಎಲ್.ಇ.ಡಿಗಳಲ್ಲಿ ಜಾಹಿರಾತು ಪ್ರದರ್ಶಿಸುವುದು, ಸಾರ್ವಜನಿಕ ಮತ್ತು ವೈಯಕ್ತಿಕ ಜಾಹಿರಾತುಗಳು, ಶುಭಾಶಯಗಳು, ಸಭೆ ಸಮಾರಂಭಗಳು ಕುರಿತ ಜಾಹಿರಾತು, ಪ್ರಕಟಣೆಗಳ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರ, ಬಾವುಟಗಳು ಅಳವಡಿಸುವುದನ್ನು ನಿಷೇಧಿಸಲಾಗಿತ್ತು. ಆದರೂ ಸಹ ಮತ್ತೆ ಮತ್ತೆ ಅಳವಡಿಸುತ್ತಿರುವುದರಿಂದ ಸಾರ್ವಜನಿಕ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದು ಅಲ್ಲದೇ ನಗರದ ಸೌಂದರ್ಯ ಹಾಳಾಗುತ್ತಿದೆ ಮತ್ತು ಪರಿಸರಕ್ಕೆ ಮಾರಕವಾಗಿದೆ.
ಈ ಹಿನ್ನೆಲೆಯಲ್ಲಿಸರ್ಕಾರ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಿದೆ . ಹೀಗಿದ್ದರೂ ಕೆಲ ಕಡೆಗಳಲ್ಲಿ ಜಾಹಿರಾತು ಫಲಕಗಳು ಕಾಣಿಸಿಕೊಳ್ಳುತ್ತಿದೆ. ಈ ಸಂಬಂಧ ಪಾಲಿಕೆಯ ವಲಯ ಹಾಗೂ ಕೇಂದ್ರ ಕಚೇರಿಗೆ ದೂರು ನೀಡಬಹುದು. ನಿಯಮ ಮೀರಿ ಜಾಹಿರಾತು ಫಲಕ ಕಂಡು ಬಂದಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಎಚ್ಚರಿದ್ದಾರೆ.
Post a comment
Log in to write reviews