ಬೆಂಗಳೂರಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಹರಸಾಹಸ : ಮನೆ-ಮನೆ ಸಮೀಕ್ಷೆಗೆ ಮುಂದಾದ BBMP ಕಮಿಷನರ್.
ಬೆಂಗಳೂರು : ಈ ಬಾರಿ ನಗರದಲ್ಲಿ 1230 ಡೆಂಘೀ ಕೇಸ್ ಪತ್ತೆಯಾಗಿದ್ದರಿಂದ ತೀವ್ರ ಆತಂಕ ಸೃಸ್ಟಿಯಾಗಿದೆ. BBMP ವ್ಯಾಪ್ತಿಯಲ್ಲೇ ಅತೀ ಹೆಚ್ಚು ಡೆಂಘೀ ಕೇಸ್ ಬೆಳಕಿಗೆ ಬಂದಿದ್ದು, ಪಾಲಿಕೆ ಡೆಂಘೀ ನಿಯಂತ್ರಣಕ್ಕೆ ಹರಸಾಹಸ ಪಡುವಂತಾಗಿದೆ. ಈ ಹಿನ್ನೆಲೆ ನಗರದಲ್ಲಿ ಡೆಂಘೀ ಹರಡುವಿಕೆಯನ್ನು ತಡೆಯುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ನಾಗರಿಕರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ಪ್ರಕರಣ ನಿಯಂತ್ರಿಸುವ ಸಂಬಂಧ ಬುಧವಾರ ಪಾಲಿಕೆ ಕೇಂದ್ರ ಕಚೇರಿ ಸಭಾಂಗಣ 1ರಲ್ಲಿ ನಡೆದ ಸಭೆಯ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಆಯಾ ವಲಯ ವ್ಯಾಪ್ತಿಯಲ್ಲಿ ಆರೋಗ್ಯ ಪರಿವೀಕ್ಷರು, ಆಶಾ ಕಾರ್ಯಕರ್ತೆಯರು, ಎಎನ್ಎಂಗಳು ಹಾಗೂ ಲಿಂಕ್ ವರ್ಕರ್ಸ್ಗಳು ಸೇರಿದಂತೆ 1000 ಮನೆಗಳಿಗೊಂದು ಬ್ಲಾಕ್ ಅನ್ನು ರಚಿಸಿಕೊಂಡು ಡೆಂಘೀ ನಿಯಂತ್ರಿಸಲು ಕ್ರಮ ಕೈಗೊಳುತ್ತೇವೆ.
ನಾಗರಿಕರಲ್ಲಿ ಅರಿವು ಮೂಡಿಸುವುದು ಹಾಗೂ ಯಾರಿಗಾದರು ಜ್ವರ ಬಂದಿದ್ದಲ್ಲಿ ಅಂತಹವರಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಮಾಡಿಕೊಳ್ಳಲು ತಿಳಿಸುವುದು ಸೇರಿದಂತೆ ಸಮಗ್ರವಾಗಿ ಮನೆ-ಮನೆ ಸಮೀಕ್ಷೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
Post a comment
Log in to write reviews