ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿ ಪರಾರಿಯಾದ ಪ್ರಕರಣ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಮೇ 15 ರಂದು ನಡೆದಿದೆ. ಮೃತ ಯುವತಿ 19 ವಷ೯ದ ಅಂಜಲಿ ಅಂಬಿಗೇರ ಎಂದು ತಿಳಿದು ಬಂದಿದೆ.
ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ, ಆಟೊ ಚಾಲಕ ಗಿರೀಶ್ ಸಾವಾಂತ ಕೊಲೆ ಮಾಡಿದ ಆರೋಪಿ, ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪರಸ್ಪರ ಪ್ರೀತಿಸುತ್ತಿದ್ದ ಅಂಜಲಿ ಮತ್ತು ಗಿರೀಶ್ ನಡುವೆ ವೈಮನಸ್ಸು ಮೂಡಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡ ಗಿರೀಶ್, ಬುಧವಾರ ಬೆಳಗಿನ ಜಾವ 5 ಗಂಟೆಗೆ ಅಂಜಲಿ ಮನೆಗೆ ಹೋಗಿ ಬಾಗಿಲು ಬಡಿದಿದ್ದಾನೆ. ಯಾರೂ ಬಾಗಿಲು ತೆರೆಯದಿದ್ದಾಗ ಮತ್ತೊಮ್ಮೆ ಜೋರಾಗಿ ಬಾಗಿಲು ಬಡಿದಿದ್ದಾನೆ. ಅಂಜಲಿ ಸಹೋದರಿ ಬಾಗಿಲು ತೆರದಿದ್ದರು. ಏಕಾಏಕಿ ಒಳಗೆ ನುಗ್ಗಿದ ಗಿರೀಶ್ ನಿದ್ದೆಯಲ್ಲಿದ್ದ ಅಂಜಲಿಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
Post a comment
Log in to write reviews