Samayanews.

Samayanews.

2024-12-23 11:45:33

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮಧ್ಯೆ ಮೆಟ್ರೋ ಇಲ್ಲದೆ ಪ್ರಯಾಣಿಕರ ಪರದಾಟ

ಬೆಂಗಳೂರು: ನಾಗಸಂದ್ರದಿಂದ ಮಾದಾವರ ವಿಸ್ತೃತ ಮಾರ್ಗದಲ್ಲಿ ಸಿಗ್ನಲಿಂಗ್ ಟೆಸ್ಟ್ ನಡೆಯುತ್ತಿರುವ ಕಾರಣ ನಮ್ಮ ಮೆಟ್ರೋ ಹಸಿರು ಮಾರ್ಗದ 3 ನಿಲ್ದಾಣಗಳಲ್ಲಿ ಮೆಟ್ರೋ ಸಂಚಾರ ಸ್ಥಗಿತ ಗೊಂಡಿದೆ.

ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮಧ್ಯೆ ಸಂಚಾರ ಸ್ಥಗಿತವಾಗಿದೆ. ಯಾವುದೇ ಮಾಹಿತಿ ಇಲ್ಲದ ಕಾರಣ ಅನೇಕ ಪ್ರಯಾಣಿಕರು ಸ್ಟೇಷನ್​ಗೆ ಬಂದು ವಾಪಸ್ ಹೋಗುತ್ತಿದ್ದಾರೆ.

ಸದ್ಯ ಪ್ರಯಾಣಿಕರು ಆಟೋ, ಕ್ಯಾಬ್​ಗಳ ಮೊರೆ ಹೋಗುತ್ತಿದ್ದು, ನಾಗಸಂದ್ರ ದಿಂದ ಪೀಣ್ಯ ಇಂಡಸ್ಟ್ರಿಗೆ ಆಟೋ ಚಾಲಕರು 50 ಆಟೋ ಚಾಲಕರು ದುಪ್ಪಟ್ಟು ದರ ವಸೂಲಿಗೆ ಮುಂದಾದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರಿಗಾಗಿ ಬಿಎಂಟಿಸಿ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ಬಿಎಂಆರ್​ಸಿಎಲ್ ಹತ್ತು ಮೆಟ್ರೋ ಫೀಡರ್ ಬಸ್​​ಗಳ ವ್ಯವಸ್ಥೆ ಮಾಡಲಾಗಿದೆ.

 

img
Author

Post a comment

No Reviews