ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹೆಚ್ ಡಿ ರೇವಣ್ಣ ಗೆ ಕೋರ್ಟ್ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ರೇವಣ್ಣಗೆ ಎರಡನೇ ಪ್ರಕರಣದಲ್ಲಿ ಜಾಮೀನು ದೊರೆತಿದ್ದು, ಇದರಿಂದ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
42 ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಪ್ರೀತ್ ಜೆ ಅವರು ಈ ಆದೇಶ ಹೊರಡಿಸಿದ್ದು, ಜಾಮೀನಿಗೆ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರು ಶೂರಿಟಿ ನೀಡುವಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ್ದಾರೆ.
ಕೋರ್ಟ್ ರೇವಣ್ಣಗೆ ಗುರುವಾರ ಮಧ್ಯಂತರ ಜಾಮೀನು ನೀಡಿ ಮೇ (17) ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಿತ್ತು. ನಂತರ ವಾದ ಪ್ರತಿವಾದಗಳನ್ನು ಆಲಿಸಿ ಮೇ 20 ಕ್ಕೆ ವಿಚಾರಣೆಯನ್ನು ಮುಂದೂಡಿದ್ದರು, ಈಗ ಎರಡನೇ ಪ್ರಕರಣದಲ್ಲಿ ಅವರಿಗೆ ಜಾಮೀನು ಲಭ್ಯವಾಗಿದೆ.
Post a comment
Log in to write reviews