ಬೆಂಗಳೂರು: ತೆರವಾಗಲಿರುವ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯಲ್ಲಿ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ, ಎನ್ ರವಿಕುಮಾರ್ ನಡುವೆ ಪೈಪೋಟಿ ನಡೆದಿದೆ.
ವಿಧಾನ ಪರಿಷತ್ ನ ಪ್ರತಿಪಕ್ಷ ನಾಯಕರಾಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಪ್ರಸ್ತುತ ಸಂಸದರಾಗಿ ಆಯ್ಕೆಯಾದ ಹಿನ್ನಲೆ ಅವರಿಂದ ಪ್ರತಿಪಕ್ಷ ನಾಯಕನ ಸ್ಥಾನ ತೆರವಾಗಲಿದೆ. ಇದರಿಂದಾಗಿ ನೂತನ ಪರಿಷತ್ ನಾಯಕ ಯಾರಾಗಲಿದ್ದಾರೆ ಎಂದು ಚರ್ಚೆ ಶುರುವಾಗಿದೆ. ಸ್ಥಾನಕ್ಕಾಗಿ ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ, ಎನ್ ರವಿಕುಮಾರ್ ನಡುವೆ ಪೈಪೋಟಿ ನಡೆದಿದೆ.
ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದು, ಮೊದಲ ಬಾರಿಗೆ ಪರಿಷತ್ ಸದಸ್ಯರಾಗಿ ಮಾಜಿ ಸಚಿವ ಸಿ.ಟಿ.ರವಿ ಕೂಡಾ ಆಯ್ಕೆಯಾಗಿದ್ದಾರೆ. ಅವರ ಹೆಸರು ಪ್ರತಿಪಕ್ಷ ಸ್ಥಾನಕ್ಕೆ ಕೇಳಿಬರಲಾರಂಭಿಸಿದೆ. 2004ರಿಂದ 2023ರವರೆಗೆ ಸತತ ನಾಲ್ಕು ಬಾರಿ ಶಾಸಕರಾಗಿದ್ದ ಸಿ.ಟಿ.ರವಿ ಸರ್ಕಾರದ ವೈಫಲ್ಯಗಳ ಬಗ್ಗೆ ದೊಡ್ಡ ದನಿಯಲ್ಲಿ ಮುಗಿಬೀಳುವ ಸಾಮರ್ಥ್ಯ ಹೊಂದಿರುವುದರಿಂದ ಅವರು ಈ ಸ್ಥಾನಕ್ಕೆ ಸೂಕ್ತ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ.
Post a comment
Log in to write reviews