Samayanews.

Samayanews.

2024-12-23 11:41:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬಿಎಂಟಿಸಿ ಚಾಲಕ, ನಿರ್ವಾಹಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ

ಬೆಂಗಳೂರು: ಇತ್ತಿಚಿಗೆ ಬಿಬಿಎಂಟಿಸಿ ಚಾಲಕರಿಗೆ, ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೆಲವು ದಿನಗಳ ಹಿಂದೆ ಬಿಬಿಎಂಟಿಸಿ ಬಸ್ ನಿರ್ವಾಹಕನಿಗೆ ಚಾಕು ಇರಿದ ಘಟನೆ ನಡೆದಿತ್ತು.

ಇದೀಗ ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಘಟನೆ ನಡೆದಿದ್ದು, ಬಿಎಂಟಿಸಿ ವೋಲ್ವೋ ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ ಹಾಕಲಾಗಿದೆ.  ಪ್ರಯಾಣಿಕ ಬಿಎಂಟಿಸಿ ಬಸ್ ನಿರ್ವಾಹಕ ಮತ್ತು ಚಾಲಕನಿಗೆ ಸ್ಕ್ರೂಡ್ರೈವರ್ ತೋರಿಸಿ ಬೆದರಿಕೆ ಹಾಕಿದ್ದಾನೆ.

ಬಿಎಂಟಿಸಿ ವೋಲ್ವೋ ಬಸ್ ಅತ್ತಿಬೆಲೆಯಿಂದ ಮೆಜಸ್ಟಿಕ್ಗೆ ಹೋಗುತ್ತಿತ್ತು. ಬೆದರಿಕೆ ಹಾಕಿದ ಪ್ರಯಾಣಿಕ ಕೊನಪ್ಪನ ಅಗ್ರಹಾರದಲ್ಲಿ ಬಸ್ ಹತ್ತಿದ್ದಾನೆ. ನಿರ್ವಾಹಕ ಪ್ರಯಾಣಿಕರಿಗೆ ಟಿಕೆಟ್ ನೀಡುವ ಸಂಬಂಧ ಬಸ್ ಅನ್ನು ಅದೇ ನಿಲ್ದಾಣದಲ್ಲಿ ಕೆಲ ಹೊತ್ತು ನಿಲ್ಲಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಪ್ರಯಾಣಿಕ ಹೊಸ ರೋಡ್ ಬಸ್ ನಿಲ್ದಾಣದಲ್ಲಿ ಬಸ್ನಿಂದ ಇಳಿದು, ಬ್ಯಾಗ್ನಲ್ಲಿದ್ದ ಸ್ಕ್ರೂಡ್ರೈವರ್ ತೆಗೆದು, ಚಾಲಕ ಮತ್ತು ನಿರ್ವಾಹಕನಿಗೆ ತೋರಿಸಿ, ಚುಚ್ಚಿ ಬಿಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ.
 

img
Author

Post a comment

No Reviews