ಟಾಪ್ 10 ನ್ಯೂಸ್
10ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಭದ್ರತಾ ಸಂಸ್ಥೆಗಳಿಂದ ತೀವ್ರ ಶೋಧ ಕಾರ್ಯ
ರಾಷ್ಟ್ರ ರಾಜಧಾನಿ ದೆಹಲಿಯ 10ಕ್ಕೂ ಹೆಚ್ಚು ಶಾಲೆಗಳಿಗೆ ಬುಧವಾರ ಬೆಳಗ್ಗೆ ಬಾಂಬ್ ಬೆದರಿಕೆ ಬಂದಿದೆ. ಮಯೂರ್ ವಿಹಾರ್ನಲ್ಲಿರುವ ಮದರ್ ಮೇರಿ ಶಾಲೆ, ದ್ವಾರಕಾದಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್, ಚಾಣಕ್ಯಪುರಿಯ ಸಂಸ್ಕೃತಿ ಶಾಲೆ, ವಸಂತ್ ಕುಂಜ್ನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಸಾಕೇತ್ನ ಅಮಿಟಿ ಸ್ಕೂಲ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು.
ಇ - ಮೇಲ್ ಬೆದರಿಕೆ ಬಗ್ಗೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಎಲ್ಲ ಐದು ಶಾಲೆಗಳಲ್ಲಿ ತೀವ್ರ ಪರಿಶೀಲನೆ ಕೈಗೊಳ್ಳಲಾಗಿದೆ. ಬಾಂಬ್ ಪತ್ತೆ ತಂಡ, ಬಾಂಬ್ ನಿಷ್ಕ್ರಿಯ ದಳ ಮತ್ತು ದೆಹಲಿ ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಶಾಲೆಗೆ ಧಾವಿಸಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.
Post a comment
Log in to write reviews