ಬೆಂಗಳೂರು: ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಆಟೋ ಚಾಲಕ ಕೋಪಗೊಂಡು ಯುವತಿಯನ್ನ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿರುವ ಆರೋಪ ಕೇಳಿಬಂದಿದ್ದು, ಈ ಘಟನೆ ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2ರಂದು ನಡೆದಿದೆ ಎನ್ನಲಾಗಿದೆ.
ಯುವತಿ ಹಾಗೂ ಆಕೆಯ ಸ್ನೇಹಿತ ಇಬ್ಬರೂ ಓಲಾ ಆಟೋವನ್ನು ಬುಕ್ ಮಾಡಿ ಸಕಾಲಕ್ಕೆ ಆಟೋ ಬಾರದ ಹಿನ್ನೆಲೆ ಮತ್ತೊಂದು ಆಟೋವನ್ನು ಬುಕ್ ಮಾಡಿದ್ದಳು. ಬಳಿಕ ಮುಂಚಿತವಾಗಿ ಬಂದ ಆಟೋವನ್ನು ಹತ್ತಿ, ಈ ಹಿಂದೆ ಬುಕ್ ಮಾಡಿದ್ದ ಆಟೋವನ್ನು ರದ್ದು ಮಾಡಿದ್ದಳು. ಇದನ್ನು ಗಮನಿಸಿದ ಆಟೋ ಚಾಲಕ ಯುವತಿಯನ್ನ ಹಿಂಬಾಲಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿದ್ದು, ಇನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋವನ್ನು ಮಾಡಿಕೊಂಡಿದ್ದ ಯುವತಿ, ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡು ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿದ್ದಾಳೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ಪರಿಶೀಲಿಸಿದ ಪೊಲೀಸರು, ಆಟೋ ಚಾಲಕ ಮುತ್ತುರಾಜ್ ಎಂಬಾತನನ್ನ ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಯುವತಿಗೂ ಪೊಲೀಸರು ನೊಟೀಸ್ ನೀಡಿ ವಿಚಾರಣೆಗೆ ಬರಲು ಸೂಚಿಸಿದ್ದಾರೆ.
Post a comment
Log in to write reviews