Samayanews.

Samayanews.

2024-11-14 10:50:24

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಂಚು ಗೆದ್ದ ಸ್ವಪ್ನಿಲ್ ಕುಸಾಲೆಗೆ 1 ಕೋಟಿ ಬಹುಮಾನ ಪ್ರಕಟಿಸಿದ :ಏಕನಾಥ ಶಿಂಧೆ

ಮುಂಬಯಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ (paris Olympics)  ಗುರುವಾರ ನಡೆದಿದ್ದ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಶೂಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್​ ಕುಸಾಲೆ(Swapnil Kusale) ಅವರ ಈ ಸಾಧನೆಯನ್ನು ಪರಿಗಣಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ (Eknath Shinde) 1 ಕೋಟಿ ಬಹುಮಾನ ಪ್ರಕಟಿಸಿದ್ದಾರೆ

ಕೊಲ್ಹಾಪುರ ಜಿಲ್ಲೆಯ ಕಂಬಲ ವಾಡಿಯವರಾದ ಸ್ವಪ್ನಿಲ್​, 2009ರಲ್ಲಿ ಮಹಾರಾಷ್ಟ್ರದ ಕ್ರೀಡಾ ಪ್ರಭೋದಿನಿ ಯೋಜನೆಯಡಿ ಕ್ರೀಡಾ ತರಬೇತಿಗೆ ಆಯ್ಕೆಯಾದರು.

ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಸ್ಪರ್ಧೆಯಲ್ಲಿ ಪದಕ ಗೆದ್ದ ಮೊದಲ ಭಾರತೀಯ ಹಾಗೂ 3ನೇ ರೈಫಲ್​ ಶೂಟರ್​ ಎಂಬ ಹೆಗ್ಗಳಿಕ್ಕೆಗೆ ಪಾತ್ರಾರಾಗಿದ್ದಾರೆ. ಗುರುವಾರ ನಡೆದ ಫೈನಲ್​ ಸ್ಪರ್ಧೆಯಲ್ಲಿ ಅವರು ಒಟ್ಟು 451.4 ಅಂಕ ಗಳಿಸುವ ಮೂಲಕ ಕಂಚಿನ ಪದಕ ಗೆದ್ದಿದ್ದರು

ಸ್ವಪ್ನಿಲ್​ ಕುಸಾಲೆಗೆ ಮಹರಾಷ್ಟ್ರ ಸರ್ಕಾರದ ಬಹುಮಾನ ಮೊತ್ತದ ಹೊರತಾಗಿಯೂ ಕೇಂದ್ರ ಸರ್ಕಾರದಿಂದ 30 ಲಕ್ಷ ರೂ. ಮತ್ತು ಭಾರತೀಯ ಒಲಿಂಪಿಕ್ಸ್​ ಸಂಸ್ಥೆಯಿಂದ 50 ಲಕ್ಷ ರೂ. ಬಹುಮಾನ ಸಿಗಲಿದೆ.

ನೀತಾ ಅಂಬಾನಿಯಿಂದ ಮೆಚ್ಚುಗೆ

ಒಲಿಂಪಿಕ್ಸ್​ ಪದಕ ಗೆಲ್ಲುವ ಮೂಲಕ ದೇಶಕ್ಕೆ ಮತ್ತು ರಾಜ್ಯಕ್ಕೆ ಕೀರ್ತಿ ತಂದ ಸ್ವಪ್ನಿಲ್​ ಕುಸಾಲೆಗೆ ರಿಲಯನ್ಸ್ ಫೌಂಡೇಶನ್ (Reliance Foundation) ಸಂಸ್ಥಾಪಕಿ ಹಾಗೂ ಅಂತಾರಾಷ್ಟ್ರೀಯ ಒಲಿಂಪಿಕ್ಸ್​ ಸಮಿತಿಯ(IOC) ಸದಸ್ಯೆಯಾಗಿರುವ ನೀತಾ ಅಂಬಾನಿ(Nita Ambani) ಅಭಿನಂದನೆ ಸಲ್ಲಿಸಿದ್ದಾರೆ. “ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಸ್ವಪ್ನಿಲ್ ಕುಸಾಲೆಗೆ ನನ್ನ ಅಭಿನಂದನೆಗಳು. ನಿಮ್ಮ ಈ ಸಾಧನೆಯಿಂದ ದೇಶವೇ ಹೆಮ್ಮೆಪಡುವಂತಾಗಿದೆ. ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯ ಪ್ರತೀಕ ಈ ಗೆಲುವು. ಮುಂದೆಯೂ ಕೂಡ ದೇಶಕ್ಕಾಗಿ ಹಲವು ಪದಕ ಗೆಲ್ಲುವಂತಾಲಿ” ಎಂದು ನೀತಾ ಅಂಬಾನಿ ಹಾರೈಸಿದ್ದಾರೆ.

img
Author

Post a comment

No Reviews