ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದ್ದು, ಶೀಘ್ರದಲ್ಲೇ ತಾವಾಗೇ ತನಿಖಾ ತಂಡದ ಮುಂದೆ ಹಾಜರಾದರೆ ಒಳ್ಳೆಯದು. ಇಲ್ಲವಾದಲ್ಲಿ ಪೊಲೀಸರೇ ಅವರನ್ನು ಕರೆದೊಯ್ಯುತ್ತಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಪ್ರಕರಣ ಸಂಬಂಧ ಧ್ವನಿ ಮಾದರಿಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. ಆರೋಪಿ ಪ್ರಮುಖ ವ್ಯಕ್ತಿ ಮತ್ತು ಗಣ್ಯ ವ್ಯಕ್ತಿ ಆಗಿರುವುದರಿಂದ ಕ್ರಮ ಕೈಗೊಳ್ಳುವ ಮುನ್ನ ಎಲ್ಲವನ್ನೂ ಪರಿಶೀಲಿಸಬೇಕಾಗುತ್ತದೆ ಎಂದರು.
ರಾಹುಲ್‌ಗಾಂಧಿ ಬೆಂಗಳೂರಿಗೆ ಬಂದಾಗ ಈ ಬಗ್ಗೆ ಸೂಚನೆ ನೀಡಿದ್ದಾರೆ ಎಂಬ ಬಿಜೆಪಿಯ ಟೀಕೆಗೆ ಪ್ರತಿಕ್ರಿಯಿಸಿದ ಅವರು, ಹೀಗೆಲ್ಲಾ ಕಥೆ ಕಟ್ಟಿದರೆ ಏನು ಪ್ರಯೋಜನವಿಲ್ಲ ಅವರು ಇಂತಹ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ವಿರೋಧಪಕ್ಷಗಳಿಗೆ ಟೀಕೆ ಮಾಡುವುದು ಬಿಟ್ಟು ಬೇರೆ ಇನ್ಯಾವ ಕೆಲಸ ಇದೆ. ಯಡಿಯೂರಪ್ಪ ವಿವಿಐಪಿ ಆಗಿರುವುದರಿಂದ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಮುಂದುವರೆಯಬೇಕಾಗುತ್ತದೆ. ಈಗಾಗಲೆ ಸಾಕ್ಷ್ಯಾಧಾರಗಳನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದ್ದು ವರದಿ ಬಂದ ನಂತರ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ ಎಂದರು.
Post a comment
Log in to write reviews