Samayanews.

Samayanews.

2024-12-23 11:56:48

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಲೈಂಗಿಕ ದೌರ್ಜನ್ಯ ಆರೋಪಿಗಳ ಮನೆಗಳ ಮೇಲೆ ಬುಲ್ಡೋಜರ್ ಸವಾರಿ.

ಮಧ್ಯಪ್ರದೇಶ: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸ್ಕಾಲರ್‌ಶಿಪ್ ಹೆಸರಿನಲ್ಲಿ 7 ಬುಡಕಟ್ಟು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. 
ಪ್ರಕರಣ ಸಂಬಂಧ ಕ್ರಮ ಕೈಗೊಂಡ ಪೊಲೀಸರು ಹಾಗೂ ಆಡಳಿತ ಮಂಡಳಿ ಪ್ರಮುಖ ಆರೋಪಿಯ ಮನೆಯನ್ನು ಬುಲ್ಡೋಜರ್ ಬಳಸಿ ನೆಲಸಮಗೊಳಿಸಿದೆ. ಘಟನೆಯಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳ ಮನೆಗಳನ್ನ ಬುಲ್ಡೋಜರ್ ಬಳಸಿ ನೆಲಾಸಮ ಮಾಡಲಾಗಿದೆ.
ಸಿಧಿ ಜಿಲ್ಲೆಯ ಮಹೌಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ಸಂವೇದನಾ ಶೀಲ ಪ್ರಕರಣ ಬೆಳಕಿಗೆ ಬಂದಿದೆ. ಇದರಲ್ಲಿ ಕಾಲೇಜಿನಲ್ಲಿ ಓದುತ್ತಿದ್ದ 7 ವಿದ್ಯಾರ್ಥಿನಿಯರನ್ನು ಸ್ಕಾಲರ್‌ಶಿಪ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ ನಡಿಸಲಾಗಿದೆ. ಆರೋಪಿಗಳು, ಧ್ವನಿ ಬದಲಾಯಿಸುವ ಆ್ಯಪ್ ಮೂಲಕ ಈ ಕೃತ್ಯ ಎಸಗುತ್ತಿದ್ದಾರೆ. ಮಹಿಳಾ ಶಿಕ್ಷಕರಂತೆ ಬಿಂಬಿಸಿ ಹೆಣ್ಣು ಮಕ್ಕಳನ್ನು ವಂಚಿಸುತ್ತಿದ್ದರು. ವಿಷಯ ಬೆಳಕಿಗೆ ಬಂದ ತಕ್ಷಣ ಪೊಲೀಸರು ಕ್ರಮ ಕೈಗೊಂಡು ಪ್ರಮುಖ ಆರೋಪಿ ಬ್ರಿಜೇಶ್ ಪ್ರಜಾಪತಿ ಮತ್ತು ಆತನ 3 ಸಹಚರರನ್ನು ಬಂಧಿಸಿದ್ದಾರೆ. 
ಈ ಮೂವರು ಆರೋಪಿಗಳು ಬ್ರಿಜೇಶ್ ಪ್ರಜಾಪತಿಯ ಸಂಬಂಧಿಕರಾಗಿದ್ದು, ಆರೋಪಿಯ ಎಲ್ಲಾ ಅಪರಾಧ ಚಟುವಟಿಕೆಗಳಲ್ಲಿ ಆರೋಪಿಗೆ ಬೆಂಬಲ ನೀಡುತ್ತಿದ್ದರು. ಪೊಲೀಸ್ ತಂಡ ಆರೋಪಿಯ ಮನೆಗೆ ತೆರಳಿ ಬುಲ್ಡೋಜರ್ ಕಾರ್ಯಾಚರಣೆ ನಡೆಸಿ ಆರೋಪಿಗಳ ಮನೆಗಳನ್ನು ನೆಲಸಮಗೊಳಿಸಿದೆ.
ಪ್ರಕರಣದ ತನಿಖೆಗಾಗಿ 9 ಸದಸ್ಯರ ಎಸ್‌ಐಟಿ ತಂಡವನ್ನು ರಚಿಸಲಾಗಿದೆ. ಈ ಸಂಪೂರ್ಣ ತಂಡವು 7 ದಿನಗಳಲ್ಲಿ ಪ್ರಕರಣದ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.

img
Author

Post a comment

No Reviews