ಕರ್ನಾಟಕ
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ ಸಿಎಂ ಸಿದ್ದು ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ
ಬೆಂಗಳೂರು : ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಿ ರಾಮನಗರವನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಿಸಬೇಕು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್ ಮತ್ತು ಶಾಸಕರು ಸಿಎಂ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಿದ್ದರು.
ಇದೀಗ ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಸಿಎಂ ಸಿದ್ದು ನೇತೃತ್ವದ ಕ್ಯಾಬಿನೆಟ್ ಸಭೆಯಲ್ಲಿ ರಾಮನಗರ ಜಿಲ್ಲೆ ಬದಲಾವಣೆಯ ಬಗ್ಗೆ ಸಚಿವ ಹೆಚ್.ಕೆ.ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ ಡಿಸಿಎಂ ಡಿಕೆಶಿ ಪ್ರಯತ್ನದ ಫಲವಾಗಿ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಹೆಸರು ಬದಲಾವಣೆಯಾಗೆ ಒಪ್ಪಿಗೆ ಸಿಕ್ಕಿದೆ.
ರಾಮನಗರಕ್ಕೆ ಬೆಂಗಳೂರು ದಕ್ಷಿಣ ಹೆಸರು ಬದಲಾವಣೆಯಾಗಲಿದ್ದು, ಐದು ತಾಲೂಕುಗಳನ್ನು ಒಳಗೊಂಡ ಅಂದರೆ ರಾಮನಗರ, ಕನಕಪುರ, ಚನ್ನಪಟ್ಟಣ, ಮಾಗಡಿ, ಹಾರೋಹಳ್ಳಿ ಸೇರಿಸಿ ಬೆಂಗಳೂರು ದಕ್ಷಿಣ ರಚನೆಯಾಗಲಿದೆ.
Post a comment
Log in to write reviews