ಕನ್ನಡ ಚಿತ್ರರಂಗದಲ್ಲಿ ಮಹಿಳಾ ನಿರ್ದೇಶಕಿಯರ ಸಂಖ್ಯೆ ತೀರ ವಿರಳ ಎನ್ನಬಹುದು. ಇತ್ತೀಚೆಗೆ ಕೆಲ ಮಹಿಳಾ ತಂತ್ರಜ್ಞರುಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಂಥವರಲ್ಲಿ ಶ್ರೀಪಲ್ಲವಿ ಕೂಡ ಒಬ್ಬರು. ಇವರೊಂದು ಮಹಿಳಾ ಪ್ರಧಾನವಾದ ಕತೆಯುವಳ್ಳ ರಹಸ್ಯ, ರೋಮಾಂಚಕ ,ಮತ್ತು ,ಅದ್ಬುತವಾದ ಪ್ರೇಯಸಿ ಪರಿಕಲ್ಪನೆ ಇಟ್ಟುಕೊಂಡು “ಕ್ಯಾನ್ಬೆರಿ ಬೇಬೀಸ್”ಎಂಬ ಚಿತ್ರ ನಿರ್ದೇಶನ ಮಾಡಲು ಹೊರಟಿದ್ದಾರೆ.
5 ಜನ ಯುವತಿಯರ ಸುತ್ತ ನಡೆಯುವ ಕಥೆ ಹೊಂದಿದ ಕ್ಯಾನ್ಬೆರಿ ಬೇಬೀಸ್ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಶ್ರೀ ಬಲಮುರಿ ಬಾಲಚಂದ್ರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕಿ ಶ್ರೀಪಲ್ಲವಿ, ನಾನು ಚಿತ್ರರಂಗಕ್ಕೆ ಬಂದು ಎಂಟು ವರ್ಷವಾಯ್ತು. ಕೆಲ ಚಿತ್ರಗಳಿಗೆ ಸಹಾಯಕರಾಗಿ ಕೆಲಸ ಮಾಡಿದ ನಂತರ ಮಾಯಾಜಾಲ ಎಂಬ ಸಿನಿಮಾ ನಿದೇಶನ ಮಾಡಿದ್ದೆ. ಇದು ಎರಡನೇ ಚಿತ್ರ. ದೊಡ್ಡ ಕನಸಿಟ್ಟುಕೊಂಡು ಬೆಂಗಳೂರಿಗೆ ಬರುವ ಐವರು ಯುವತಿಯರು ಇಲ್ಲಿ ಬಂದ ಮೇಲೆ ಏನೆಲ್ಲ ತೊಂದರೆಗಳನ್ನು ಎದುರಿಸಿದರು ಎಂಬ ಬಗ್ಗೆ ಚಿತ್ರದಲ್ಲಿ ಹೇಳಲಿದ್ದೇವೆ. ಬೆಂಗಳೂರು ಸುತ್ತಮುತ್ತ 25 ರಿಂದ 30 ದಿನಗಳ ಕಾಲ ಚಿತ್ರೀಕರಣ ಮಾಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದರು.
Post a comment
Log in to write reviews