ಚಮರಾಜನಗರ : ಕೃಷ್ಣರಾಜಸಾಗರ ಅಣೆಕಟ್ಟು (KRS Dam) ಹಾಗು ಕಬಿನಿ ಜಲಾಶಯಗಳಿಂದ (Kabini Dam) ಅಧಿಕ ನೀರು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ಕಾವೇರಿ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ 9 ಗ್ರಾಮಗಳಾದ ದಾಸನಪುರ, ಹರಳೆ, ಅಗ್ರಹಾರ, ಹಳೆ ಹಂಪಾಪುರ, ಹೊಸ ಹಂಪಾಪುರ, ಮುಳ್ಳೂರು, ಹಳೆಅಣಗಳ್ಳಿ, ಯಡಕುರಿಯ, ಧನಗೆರೆ, ಸರಗೂರು ಗ್ರಾಮಗಳು ಜಲಾವೃತವಾಗಿವೆ.
ಈ 9 ಗ್ರಾಮಗಳಿಗೆ ತೆರಳದಂತೆ ಬ್ಯಾರಿಕೇಡ್ ಅಳವಡಿಸಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ದಾಸನಪುರ, ಹಳೇ ಅಣಗಳ್ಳಿ ಗ್ರಾಮಸ್ಥರನ್ನು ಕೊಳ್ಳೇಗಾಲದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗು ಇತರ ಅಧಿಕಾರಿಗಳು ಸ್ಥಳದಲ್ಲಿ ವಾಸ್ಥವ್ಯ ಹೂಡಿದ್ದಾರೆ. ಗ್ರಾಮಸ್ಥರು ನೀರಿನ ಬಳಿ ಹೋಗದಂತೆ ಎಚ್ಚರಿಕೆ ವಹಿಸಲು ಸಿಬ್ಬಂದಿಗಳನ್ನ ನಿಯೋಜಿಸಲಾಗಿದೆ.
Post a comment
Log in to write reviews