Samayanews.

Samayanews.

2024-11-15 07:25:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಾಗರಿಕರ ದೂರುಗಳನ್ನು ಕೂಡಲೇ ಪರಿಹರಿಸಬೇಕು: ಉಮಾಶಂಕರ್ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಕೇಂದ್ರ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಗೆ ನಗರಾಭಿವೃದ್ಧಿ ಇಲಾಖೆಯ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಭೇಟಿ ನೀಡಿದ್ದಾರೆ. ಬಿಬಿಎಂಪಿ ಕಚೇರಿಯ ಆರನೇ ಮಹಡಿಯಲ್ಲಿರುವ ನಿಯಂತ್ರಣ ಕೊಠಡಿ ಹಾಗೂ ICCC ಕೇಂದ್ರಕ್ಕೆ ಭೇಟಿ ನೀಡಿ ಕಾರ್ಯ ವೈಖರಿಯನ್ನು ಪರಿಶೀಲಿಸಿದ್ದಾರೆ. ಅಲ್ಲದೇ ನಿಯಂತ್ರಣ ಕೊಠಡಿಯನ್ನು ಸರಿಯಾಗಿ ಮೇಲ್ವಿಚಾರಣೆ ಮಾಡಬೇಕು ಹಾಗೂ ನಾಗರಿಕರಿಂದ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಬೇಕು ಅಂತ ಉಮಾಶಂಕರ್‌ ತಿಳಿಸಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ಮಾತನಾಡಿ, ಪಾಲಿಕೆಯ ಸಹಾಯವಾಣಿ ಸಂಖ್ಯೆ 1533ಗೆ ನಾಗರಿಕರಿಂದ ದೂರುಗಳು ಬರುತ್ತವೆ. ಬಂದಂತಹ ಕರೆಗಳನ್ನು ನಿಯೋಜಿಸಲ್ಪಟ್ಟ ಸಿಬ್ಬಂದಿ ಸ್ವೀಕರಿಸಿ ಸಹಾಯ 2.0 ತಂತ್ರಾಂಶದಲ್ಲಿ ದೂರು ದಾಖಲಿಸಬೇಕು. ನಂತರ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರಿನ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲಾಗುತ್ತೆ ಅಂತ ಮಾಹಿತಿ ನೀಡಿದ್ದಾರೆ. 
ಬೆಂಗಳೂರು ಸ್ಮಾರ್ಟ್ ಸಿಟಿ ಮೂಲಕ ಸ್ಥಾಪಿಸಿರುವ ಇಂಟಿಗ್ರೇಟೆಡ್ ಕಮಾಂಡ್ ಅಂಡ್ ಕಂಟ್ರೋಲ್ ಸೆಂಟರ್(ಐಸಿಸಿಸಿ)ಗೆ ಭೇಟಿ ನೀಡಿದ ಉಮಾಶಂಕರ್‌, ಪರಿಶೀಲನೆ ಮಾಡಿ ಐಸಿಸಿಸಿ ಹೇಗೆ ಕಾರ್ಯ ನಿರ್ವಹಿಸಲಿದೆ ಹಾಗೂ ಯಾವ್ಯಾವುದನ್ನು ಮೇಲ್ವಿಚಾರಣೆ ಮಾಡಲಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು. 
ರಾಜಕಾಲುವೆಗೆ ಅಳವಡಿಸಿರುವ ಸೆನ್ಸಾರ್ ಗಳ ಮೇಲ್ವಿಚಾರಣೆಯ ಪರಿಶೀಲನೆ:
ನಗರದಲ್ಲಿರುವ ರಾಜಕಾಲುವೆಗಳಲ್ಲಿ ಕೆ.ಎಸ್.ಎನ್.ಡಿ.ಎಂ.ಸಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ವತಿಯಿಂದ ನೀರಿನ ಮಟ್ಟವನ್ನು ಅಳೆಯುವ ಸೆನ್ಸಾರ್ ಗಳನ್ನು ಅಳವಡಿಸಲಾಗಿದ್ದು, ಅದನ್ನು ಐಸಿಸಿಸಿ ಕೇಂದ್ರದಿಂದ ಮೇಲ್ವಿಚಾರಣೆ ಮಾಡಲಾಗುತ್ತದೆ. ಅದು ಯಾವ ರೀತಿ ಕಾರ್ಯನಿರ್ವಹಿಸಲಿದೆ, ಇದರಿಂದಾಗುವ ಅನುಕೂಲ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ವಿಪತ್ತು ನಿರ್ವಹಣೆ ವಿಭಾಗದ ವಿಶೇಷ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

img
Author

Post a comment

No Reviews