SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತಾ ಹಾಗೂ ದ್ವಿತೀಯ ಸ್ಥಾನ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸನ್ಮಾನಿಸಿದರು. ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಮುಖ್ಯಮಂತ್ರಿಗಳು ಶುಭ ಹಾರೈಸಿ ಬಹುಮಾನ ನೀಡಿದರು.
ಶಾಲೆಯ ಅಭಿವೃದ್ಧಿಗೂ ನೆರವು
ಅಂಕಿತಾ ಮತ್ತು ನವನೀತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂಗಳ ನೆರವನ್ನು ಸಿಎಂ ನೀಡಿದರು. ಅಲ್ಲದೇ ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ 1 ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂಗಳ ಅನುದಾನ ಬಿಡುಗಡೆ ಮಾಡುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲೂ ಸಿಎಂ ಬರೆದುಕೊಂಡಿದ್ದಾರೆ.
Tags:
- India News
- Kannada News
- sslc topper
- sslc topper anirudh
- sslc toppers answer sheet
- sslc topper's answer sheet
- result of topper
- class 10 topper
- toppers answer sheet
- want to become a topper?
- sslc topper anirudh guttikar with gaurish akki
- revalued sslc paper
- sslc paper revaluation
- sslc old question papers with answer
- sslc cbse result
Post a comment
Log in to write reviews