Samayanews.

Samayanews.

2024-11-15 07:04:24

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ರಮ ಮದ್ಯ ಸಾಗಾಣೆ ತಡೆಯಲು ಸಿಎಂ ಸೂಚನೆ

ಬೆಂಗಳೂರು: ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮ ಮದ್ಯ ಸಾಗಣೆಯಾಗುವುದನ್ನು ತಡೆಯುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಮಂಗಳವಾರ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿದ್ದರಾಮಯ್ಯ, ಅಬಕಾರಿ ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಪಡಬೇಕು ಎಂದು ಹೇಳಿದರು.
ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡಬೇಕು. ಇಲಾಖೆಯಲ್ಲಿ ಕಾನ್ಸ್ ಟೇಬಲ್, ಸಬ್ ಇನ್ಸ್‌ಪೆಕ್ಟರ್ ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚಿಸಿದರು.
ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದೇ ವೇಳೆ ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಆನ್‍ಲೈನ್‍ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

img
Author

Post a comment

No Reviews