ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣರ ಪಾಸ್ಪೋರ್ಟ್ ರದ್ದು ಮಾಡಬೇಕೆಂಬ ವಿಚಾರದಲ್ಲಿ ವಿದೇಶಾಂಗ ಸಚಿವಾಲಯ ಮಧ್ಯ ಪ್ರವೇಶಿಸಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈಗಾಗಲೇ ಅವರು ಒಂದು ಪತ್ರ ಬರೆದಿದ್ದರು. ಅದಕ್ಕೆ ಪ್ರತಿಕ್ರಿಯೆ ಬಾರದ ಕಾರಣ ಮತ್ತೆ ಪತ್ರ ಬರೆದಿದ್ದಾರೆ. ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸುವಂತೆ ಮೋದಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವಿದೇಶದಿಂದ ಪ್ರಜ್ವಲ್ ರೇವಣ್ಣರನ್ನು ಕರೆಸುವುದೇ ನಮ್ಮ ಆದ್ಯತೆಯ ಕೆಲಸ. ಕಾನೂನಾತ್ಮಕವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸಲು ಎಸ್‌ಐಟಿ ಸಿದ್ಧವಿದೆ. ಹೀಗಾಗಿ ವಿದೇಶಾಂಗ ಸಚಿವಾಲಯ ಮಧ್ಯಪ್ರವೇಶಕ್ಕೆ ಪ್ರಧಾನಿ ಮೋದಿ ಸೂಚನೆ ನೀಡಬೇಕು. ವಿದೇಶಾಂಗ ಸಚಿವಾಲಯದ ಮೂಲಕ ಕೂಡಲೇ ಕ್ರಮಕೈಗೊಳ್ಳಬೇಕು. ಅಂತಾರಾಷ್ಟ್ರೀಯ ಪೊಲೀಸ್ ಏಜೆನ್ಸಿ ಮೂಲಕವೂ ಕ್ರಮ ಕೈಗೊಳ್ಳಬೇಕು. ಪ್ರಜಲ್ವ್ ಪಾಸ್‌ಪೋರ್ಟ್ ರದ್ದುಪಡಿಸಬೇಕೆಂದು ಮೇ ಮೊದಲ ವಾರದಲ್ಲಿಯೇ ಪ್ರಧಾನಿಗೆ ಬರೆದ ಪತ್ರದಲ್ಲಿ ಸಿದ್ದರಾಮಯ್ಯ ಆಗ್ರಹಿಸಿದ್ದರು. ಆದರೆ, ಈ ವರೆಗೆ ಪತ್ರಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
Post a comment
Log in to write reviews