ಬೆಂಗಳೂರು: ಕೊಡಗು ಹೊರತುಪಡಿಸಿ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಬುಧವಾರ ರಾತ್ರಿಯಿಂದೀಚೆಗೆ ತಗ್ಗು ಪ್ರದೇಶಗಳಿಗೆ ನದಿ ನೀರು ನುಗ್ಗಿ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಭೂಕುಸಿತ ಕಂಡು ಬಂದಿದ್ದು, ಹಲವೆಡೆ ರಸ್ತೆ ಸಂಚಾರಕ್ಕೆ ಸಮಸ್ಯೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಲ್ಲಿ ಗುಡ್ಡ ಕುಸಿತಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಸುಳ್ಯ ತಾಲೂಕು, ಉಡುಪಿಯ ಬೈಂದೂರು ವ್ಯಾಪ್ತಿಯಲ್ಲಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲಗ್ರಾಮಗಳಲ್ಲಿ ಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿತ್ತು. ಇದೀಗ ಮತ್ತೆ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಶುಕ್ರವಾರವೂ ಉಡುಪಿ ಜಿಲ್ಲೆಯ ಕುಂದಾಪುರ, ಬೈಂದೂರು, ಬ್ರಹ್ಮಾವರ ತಾಲೂಕು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ಹಾಗೂ ಹೊನ್ನಾವರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
Post a comment
Log in to write reviews