ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಿಬಿಐ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಸಚಿವ ಸ್ಥಾನದಿಂದ ಸಚಿವ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ನಿಯೋಗ ಗುರುವಾರ ರಾಜ್ಯಪಾಲರಿಗೆ ದೂರು ನೀಡಲಿದೆ.
ಪ್ರಕರಣ ಸಂಬಂಧ ಯೂನಿಯನ್ ಬ್ಯಾಂಕಿನ ದೂರಿನ ಹಿನ್ನೆಲೆಯಲ್ಲಿ ಸಿಬಿಐ ಸ್ವಯಂಪ್ರೇರಿತವಾಗಿ ಎಫ್‍ಐಆರ್ ದಾಖಲಿಸಿದೆ. ಇದರ ಬೆನ್ನಲ್ಲೇ ಬಿಜೆಪಿ ದೂರು ದಾಖಲಿಸಲು ಸಿದ್ದತೆ ನಡೆಸಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಂಡಿರುವುದು ಜಗಜ್ಜಾಹೀರಾಗಿದೆ. ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರರ ರಾಜೀನಾಮೆ ಪಡೆಯುವ ವಿಚಾರದಲ್ಲಿ ಇಲ್ಲಿನವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಇದನ್ನು ಬಿಜೆಪಿ ಉಗ್ರವಾಗಿ ಖಂಡಿಸಿತ್ತಲ್ಲದೆ, ಸಚಿವರ ರಾಜಿನಾಮೆಗೆ ಇದೇ 6ರವರೆಗೆ ಗಡುವು ನೀಡಿತ್ತು. ಪರಿಶಿಷ್ಟ ವರ್ಗದವರಿಗೆ ಮೀಸಲಿಟ್ಟ 187 ಕೋಟಿ ದುರ್ಬಳಕೆ ಆಗಿದೆ. 187 ಕೋಟಿ ವಾಪಸ್ ತಂದು ಆ ವರ್ಗದವರಿಗೆ ಮುಟ್ಟಿಸುವವರೆಗೂ ಬಿಜೆಪಿ ತನ್ನ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಎಚ್ಚರಿಸಿತ್ತು.
Post a comment
Log in to write reviews