ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿರುವ ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಇಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ED ಅಧಿಕಾರಿಗಳ ವರ್ತನೆ ವಿರೋಧಿಸಿ ಕಾಂಗ್ರೆಸ್ ಶಾಸಕರು ಇಂದು ಪ್ರತಿಭಟನೆಗೆ ನಡೆಸುತ್ತಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯರನ್ನು ಸಿಲುಕಿಸಲು ಹೋಗಿ ED ಇದೀಗ ಲಾಕ್ ಆಗಿದೆ. ಸಿಎಂ ಹೆಸರು ಹೇಳುವಂತೆ ನಿಗಮದ ಹಿಂದಿನ ಎಂಡಿ ಕಲ್ಲೇಶಪ್ಪ ಅವರಿಗೆ ಕಿರುಕುಳ ನೀಡಿರುವ ED ಅಧಿಕಾರಿಗಳ ವರ್ತನೆ ವಿರೋಧಿಸಿ ಕಾಂಗ್ರೆಸ್ ಪಕ್ಷದ ಶಾಸಕರು ಇಂದು ಬೆಳಗ್ಗೆ ವಿಧಾನಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಧರಣಿ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವರಾದ ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ ಹೆಚ್.ಕೆ.ಪಾಟೀಲ್, ಕೆ.ವೆಂಕಟೇಶ್, MLAಗಳು, MLCಗಳು ಭಾಗಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಹೆಸರು ಹೇಳುವಂತೆ ED ಅಧಿಕಾರಿಗಳಿಂದ ಒತ್ತಡ, ಮಾನಸಿಕವಾಗಿ ಹಿಂಸೆ ನೀಡಿ ಕಿರುಕುಳ ನೀಡಿದ್ದಾರೆ ಎಂದು ವಾಲ್ಮೀಕಿ ನಿಗಮದ ಮಾಜಿ MD ಕಲ್ಲೇಶ್ ಅವರು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದು, ದೂರಿನ ಮೇರೆಗೆ ED ಅಧಿಕಾರಿಗಳಾದ ಮಿತ್ತಲ್, ಮುರುಳಿ ಕಣ್ಣನ್ ವಿರುದ್ಧ FIR ದಾಖಲಾಗಿದೆ.
ಇಂದು ಅಧಿವೇಶನದಲ್ಲೂ ED ವಿರುದ್ಧದ FIR ವಿಚಾರ ಪ್ರಸ್ತಾಪ ಆಗುವ ಸಾಧ್ಯತೆಯಿದೆ. ಬಿಜೆಪಿ ವಿರುದ್ಧ ಸದನದಲ್ಲೇ ಗುಡುಗಲು ಕಾಂಗ್ರೆಸ್ ಸಜ್ಜಾಗಿದ್ದು, ಹಗರಣ ಅಸ್ತ್ರ ಹಿಡಿದಿರೋ ಬಿಜೆಪಿ ವಿರುದ್ಧ ಮುಗಿಬೀಳಲು ಕಾಂಗ್ರೆಸ್ ಪ್ಲಾನ್ ಮಾಡಿದೆ. ಹಾಗಾಗಿ ಇಂದು ವಿಧಾನ ಮಂಡಲದ ಉಭಯ ಸದನ ರಣಾಂಗಣವಾಗುವ ಸಾಧ್ಯತೆಯಿದೆ.
Post a comment
Log in to write reviews