ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಇದೀಗ ವಿಧಾನಪರಿಷತ್ ಚುನಾವಣೆ ಎದುರಾಗಿದೆ. ಜೂನ್ ತಿಂಗಳಲ್ಲಿ ಅವಧಿ ಮುಗಿಯುವ ಆರು ಪರಿಷತ್ ಚುನಾವಣೆಗೆ ಈಗಾಗಲೇ ದಿನಾಂಕ ನಿಗದಿಯಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಸಹ ಘೋಷಣೆ ಮಾಡಿದೆ.
ಇನ್ನು ಪರಿಷತ್ ಚುನಾವಣೆಯಲ್ಲೂ ಸಹ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದುವರೆದಿದೆ. ಒಟ್ಟು 6 ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಎಸ್ಗೆ 2 ಸ್ಥಾನಗಳನ್ನು ಬಿಟ್ಟುಕೊಟ್ಟಿದೆ. ಹಾಗಾದ್ರೆ, ಬಿಜೆಪಿ ಹಾಗೂ ಜೆಡಿಎಸ್ ಸ್ಪರ್ಧಿಸುವ ಕ್ಷೇತ್ರಗಳಾವುವು ಎನ್ನುವ ವಿವರ ಇಲ್ಲಿದೆ.
ಈ ಮೊದಲು ಬಿಜೆಪಿ ಒಟ್ಟು 6 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಒಂದು ಕ್ಷೇತ್ರವನ್ನು ಮಾತ್ರ ಜೆಡಿಎಸ್ ಪಾಲಿಗೆ ಬಿಟ್ಟಿತ್ತು. ಆದ್ರೆ, ಕುಮಾರಸ್ವಾಮಿ ಜೆಪಿ ನಡ್ಡಾ, ವಿಜಯೇಂದ್ರ ಜೊತೆ ಮಾತುಕತೆ ನಡೆಸಿ ಇನ್ನೊಂದು ಕ್ಷೇತ್ರವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಜೆಪಿಯ ಕ್ಷೇತ್ರಗಳು-ಅಭ್ಯರ್ಥಿಗಳು
ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ ಅವರನ್ನು ಘೋಷಣೆ ಮಾಡಲಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬದಲಾವಣೆ
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಹೆಸರುಗಳನ್ನು ಪ್ರಕಟಿಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಆದರೆ, ಈಗ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
Post a comment
Log in to write reviews